ಮನೆಯಂಗಳಕ್ಕೆ ಬಂದಿದ್ದ ಬೃಹತ್ ಕಾಳಿಂಗ ಸರ್ಪದ ರಕ್ಷಣೆ ! - king cobra rescued from house yard at karwar
🎬 Watch Now: Feature Video

ಕಾರವಾರ: ಹೂವಿನ ಗಿಡಗಳಲ್ಲಿ ಅವಿತುಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಿರುವ ಘಟನೆ ಕಾರವಾರದ ಗೋಟೆಗಾಳಿ ಗ್ರಾಮದಲ್ಲಿ ನಡೆದಿದೆ. ಗೋಟೆಗಾಳಿ ನಿವಾಸಿ ವಾಸು ಪೆಡ್ನೇಕರ್ ಎಂಬುವವರ ಮನೆಯ ಅಂಗಳದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆಯವರು ಆತಂಕಗೊಂಡಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ 12 ಅಡಿ ಉದ್ದವಿದ್ದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.