ಕಾಶ್ಮೀರದಲ್ಲಿ ಕೊಡಗು ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು: ವಿಡಿಯೋ ನೋಡಿ - ಕಾಶ್ಮೀರಿ ವಿದ್ಯಾರ್ಥಿಗಳು
🎬 Watch Now: Feature Video
ಅನಂತನಾಗ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ ಯುವ ವಿನಿಮಯ ಕಾರ್ಯಕ್ರಮದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಕೊಡಗಿನ ಸಂಸ್ಕೃತಿ ಅನಾವರಣಗೊಳಿಸಿದರು. ಕೊಡಗಿನ ಎರಡು ಬ್ಯಾಚ್‌ನ ವಿದ್ಯಾರ್ಥಿಗಳು ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಅಡಿಯಲ್ಲಿ ಕಾಶ್ಮೀರ ಪ್ರವಾಸದಲ್ಲಿದ್ದಾರೆ. ಅನಂತನಾಗ್ ಜಿಲ್ಲೆಯ ನೌಗಾಮ್ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಕೊಡಗಿನ ಸಾಂಪ್ರದಾಯಿಕ ನೃತ್ಯ ಪ್ರರ್ದಶಿಸಿದರು. ಎರಡು ರಾಜ್ಯಗಳ ಸಂಸ್ಕೃತಿ ಮತ್ತು ಶಿಕ್ಷಣದ ಅಭ್ಯಾಸಗಳ ವಿನಿಮಯ ನಿಟ್ಟಿನಲ್ಲಿ ಭಾರತೀಯ ಸೇನೆ ಕೈಗೊಂಡ ಈ ಕಾರ್ಯಕ್ಕೆ ಸ್ಥಳೀಯ ಕಾಶ್ಮೀರಿ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.