ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣೆ: ಸಂಕಷ್ಟದಲ್ಲಿ ನದಿ ಪಾತ್ರದ ಜನ - ರಾಯಚೂರು ಪ್ರವಾಹ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಉಕ್ಕಿ ಹರಿಯುತ್ತಿರುವ ಕೃಷ್ಣ ನದಿಯ ಪ್ರವಾಹದಿಂದ ರಾಯಚೂರು ಜಿಲ್ಲೆಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನದಿಯ ನೀರಿನಿಂದ ಪಂಪ್‌ಸೆಟ್ ಮೂಲಕ ಹೊಲ-ಗದ್ದೆಗಳಿಗೆ ನೀರು ಹರಿಸಿಕೊಂಡು ವ್ಯವಸಾಯ ಮಾಡುತ್ತಿದ್ದ ರೈತರ ಪಂಪ್ಸೆಟ್ಗಳು ಈಗ ನೀರು ಪಾಲಾಗಿವೆ. ಇನ್ನು ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ನಿರ್ಮಾಣವಾಗಿರುವ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆ ಹಂತಕ್ಕೆ ತಲುಪಿದೆ. ನದಿ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ಗುರ್ಜಾಪುರ ಬ್ಯಾರೇಜ್‌ನಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..