ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್.. - KSRTC bus accident in belagavi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16622446-thumbnail-3x2-bin.jpg)
ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ನ ಬ್ರೇಕ್ ಫೇಲ್ ಆದ ಹಿನ್ನೆಲೆ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ನುಗ್ಗಿದೆ. ಇನ್ನು, ಬಸ್ನಲ್ಲಿ 30ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಚಾಲಕ ಸೇರಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.