ಗ್ರಹಣದ ವೇಳೆ ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದ ಮುರುಘಾ ಶರಣರು! - ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ
🎬 Watch Now: Feature Video

ಚಂದ್ರ ಗ್ರಹಣದ ವೇಳೆ ಭಕ್ತರೊಂದಿಗೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಪ್ರಸಾದ ಸ್ವೀಕರಿಸಿದರು. ಗ್ರಹಣದ ಬಗ್ಗೆ ವೈಜ್ಞಾನಿಕ ತಿಳುವಳಿಕೆ ನೀಡಲು ಮುಂದಾದ ಮುರುಘಾ ಶರಣರು, ಗ್ರಹಣ ಆರಂಭ ಆಗುತ್ತಿದ್ದಂತೆ ಇಷ್ಟಲಿಂಗ ಪೂಜೆ ಮಾಡಿ ಪ್ರಸಾದ ಸ್ವೀಕರಿಸಿದರು. ಡಾ. ಶಿವಮೂರ್ತಿ ಮುರುಘಾ ಶರಣರು ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರದಲ್ಲಿ ಪ್ರಸಾದ ಸ್ವೀಕರಿಸಿದರು. ಶ್ರೀಗಳ ಜೊತೆಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ, ದಾವಣಗೆರೆಯ ಬಸವಪ್ರಭು ಸ್ವಾಮೀಜಿ ಹಾಗೂ ಭಕ್ತರು ಪ್ರಸಾದದ ರೂಪದಲ್ಲಿ ಊಟ ಮಾಡಿದರು.
TAGGED:
ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ