ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ರಕ್ಷಿಸಿದ ಪೊಲೀಸ್ ಪೇದೆ - one guy tried attempt to suicide in pune
🎬 Watch Now: Feature Video
ಪುಣೆ: ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ದತ್ತವಾಡಿ ಪೊಲೀಸ್ ಠಾಣೆ ಪೇದೆಯೊಬ್ಬರು ರಕ್ಷಣೆ ಮಾಡಿರುವ ಘಟನೆ ನಗರದ ಬಾಗುಲ್ ಉದ್ಯಾನದ ಬಳಿ ನಡೆದಿದೆ. ಸಂಜೆ 6.30ರ ಸುಮಾರಿಗೆ ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸ್ ಪೇದೆ ಸದ್ದಾಂ ಶೇಖ್ ನದಿಗೆ ಹಾರಿ ಸ್ವಪ್ನಿಲ್ ಎಂಬುವವರನ್ನು ರಕ್ಷಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯನ್ನು ಸ್ಥಳೀಯರೊಬ್ಬರು ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
Last Updated : Jul 9, 2022, 7:28 PM IST