ಸಿದ್ದರಾಮಯ್ಯ ಪಶ್ಚಾತ್ತಾಪಪಟ್ಟಿದ್ದಾರೆ, ಒಳ್ಳೆಯ ಬುದ್ಧಿ ಬಂದಿದೆ: ಶಾಮನೂರು ಶಿವಶಂಕರಪ್ಪ - etv bharat kannada
🎬 Watch Now: Feature Video
ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಈಗ ತಪ್ಪಿನ ಅರಿವಾಗಿ ಪಶ್ಚಾತ್ತಾಪಪಟ್ಟಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾವು ಮತ್ತೊಮ್ಮೆ ಧರ್ಮ ಒಡೆಯುವ ಪ್ರಯತ್ನಕ್ಕೆ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಒಳ್ಳೆಯ ಬುದ್ಧಿ ಬಂದಿದೆ. ವೀರಶೈವ ಲಿಂಗಾಯತ ಧರ್ಮ ಒಡೆಯುವುದರಲ್ಲಿ ಸಿದ್ದರಾಮಯ್ಯ ಪಾತ್ರ ಏನೂ ಇಲ್ಲ, ಅವರ ಮೇಲೆ ಬೇರೆಯವರ ಒತ್ತಡವಿತ್ತು. ಆದರೆ ಆರೋಪ ಮಾತ್ರ ಅವರ ಮೇಲೆ ಬಂತಷ್ಟೇ ಎಂದು ತಿಳಿಸಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಮತ್ತೆ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ ಎಂದು ಶಾಮನೂರು ಭವಿಷ್ಯ ನುಡಿದರು.