1200 ವಿದ್ಯಾರ್ಥಿಗಳಿಂದ ರಚನೆಯಾಯ್ತು ಭಾರತದ ಭೂಪಟ.. ಮೊಳಗಿತು ರಾಷ್ಟ್ರಗೀತೆ - ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ
🎬 Watch Now: Feature Video

ಶಿವಮೊಗ್ಗ : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೊರಬ ತಾಲೂಕಿನ ಜಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳು ಭಾರತ ಮಾತೆಗೆ ವಿಶೇಷವಾಗಿ ಗೌರವ ಸಲ್ಲಿಸಿದರು. 1200 ವಿದ್ಯಾರ್ಥಿಗಳ ಭಾರತದ ಭೂಪಟ ನಕ್ಷೆಯಲ್ಲಿ ಕೇಸರಿ, ಬಿಳಿ, ಹಸಿರಿನ ಗಾಂಧಿ ಟೋಪಿ ಧರಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಇದನ್ನು ಡ್ರೋನ್ ಕ್ಯಾಮರಾದಲ್ಲಿ ಶೂಟ್ ಮಾಡಲಾಗಿದೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಹಾಯಕ ನಿರ್ದೇಶಕರು ತಾ.ಪಂ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಗ್ರಾಮದ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.