ದೇವೇಗೌಡರ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ - ದೇವೇಗೌಡರ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
🎬 Watch Now: Feature Video
ಬೆಂಗಳೂರು: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕೆಲ ದಿನಗಳಿಂದ ದೇವೇಗೌಡರಿಗೆ ಕಾಲಿನ ನೋವು ಇದ್ದು, ಕಳೆದ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಗೆ ವೀಲ್ ಚೇರ್ನಲ್ಲೇ ಬಂದು ಮತದಾನ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶ್ರೀಗಳು ಇಂದು ಗೌಡರ ಪದ್ಮನಾಭನಗರದ ನಿವಾಸಕ್ಕೆ ತೆರಳಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.