ನೂಪುರ್ ಹೇಳಿಕೆ ಖಂಡಿಸಿ ದೇಶದ ಹಲವೆಡೆ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು - ಉದ್ರಿಕ್ತರಿಂದ ಪೊಲೀಸರ ಮೇಲೆ ಕಲ್ಲು ತೂರಾಟ
🎬 Watch Now: Feature Video

ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ನೀಡಿರುವ ವಿವಾದಿತ ಹೇಳಿಕೆ ಖಂಡಿಸಿ, ದೇಶದ ಬಹುತೇಕ ಎಲ್ಲ ನಗರಗಳಲ್ಲೂ ಶುಕ್ರವಾರದ ಪ್ರಾರ್ಥನೆ ಮುಗಿಸಿದ ಬಳಿಕ ಮುಸ್ಲಿಮರು ಹಿಂಸಾತ್ಮಕ ಪ್ರತಿಭಟನೆಗೆ ಇಳಿದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಉದ್ದೇಶದಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ತೆಲಂಗಾಣ, ಜಮ್ಮು-ಕಾಶ್ಮೀರ, ಲೂಧಿಯಾನ, ಪಶ್ಚಿಮ ಬಂಗಾಳದಲ್ಲೂ ಪ್ರತಿಭಟನೆ ನಡೆಯುತ್ತಿದೆ.
Last Updated : Jun 10, 2022, 4:45 PM IST