2ಎ ಮೀಸಲಾತಿಗೆ ಆಗ್ರಹ: ಸಿಎಂ ನಿವಾಸದ ಮುಂದೆ ಧರಣಿ ಸತ್ಯಾಗ್ರಹ
🎬 Watch Now: Feature Video
ಹಾವೇರಿ: 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶಿಗ್ಗಾಂವಿ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಒಂದು ದಿನದ ಧರಣಿ ಸತ್ಯಾಗ್ರಹ ಆರಂಭವಾಗಿದೆ. ಧರಣಿ ಸತ್ಯಾಗ್ರಹ ಅಂಗವಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಿಂದ ರ‍್ಯಾಲಿ ಆರಂಭವಾಗಿದೆ. ರ‍್ಯಾಲಿ ಆರಂಭಕ್ಕೂ ಮುನ್ನ ಶ್ರೀಗಳು ರಾಣಿ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.