ವಿಡಿಯೋ: ನೂತನ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರ ಲಾಂಛನ ಅನಾವರಣ ಮಾಡಿದ ಪ್ರಧಾನಿ - ಬೃಹತ್ ರಾಷ್ಟ್ರ ಲಾಂಛನ
🎬 Watch Now: Feature Video
ದೆಹಲಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ನೂತನ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರ ಲಾಂಛನ ಅನಾವರಣಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಹೊಸದಾಗಿ ಅನಾವರಣಗೊಂಡಿರುವ ರಾಷ್ಟ್ರೀಯ ಲಾಂಛನ ಒಟ್ಟು 9,500 ಕೆ.ಜಿ ತೂಕವಿದ್ದು, 6.5 ಮೀಟರ್ ಎತ್ತರವಿದೆ. ರಾಷ್ಟ್ರೀಯ ಲಾಂಛನ ಉದ್ಘಾಟನೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಕಾರ್ಯದಲ್ಲಿ ಭಾಗಿಯಾಗಿರುವ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.