ಬಾಂಗ್ಲಾದೇಶ ಪ್ರಧಾನಿ ಬರಮಾಡಿಕೊಂಡ ಮೋದಿ: ವಿವಿಧ ಒಪ್ಪಂದಗಳಿಗೆ ಇಂದು ಸಹಿ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video

ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಇಂದು ನವದೆಹಲಿಯ ರಾಜಘಾಟ್‌ಗೆ ತೆರಳಿ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮಾತನಾಡಿರುವ ಶೇಖ್ ಹಸೀನಾ, ಬಡತನ ನಿರ್ಮೂಲನೆ ಮಾಡಿ, ಆರ್ಥಿಕತೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಮುಖ್ಯ ಉದ್ದೇಶ. ಇದಕ್ಕೋಸ್ಕರ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಭಾರತ ನಮ್ಮ ಉತ್ತಮ ಸ್ನೇಹಿತ ದೇಶ. ಇಲ್ಲಿಗೆ ಬಂದಾಗಲೆಲ್ಲ ನನಗೆ ಸಂತೋಷವಾಗುತ್ತದೆ. ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ಭಾರತ ನೀಡಿರುವ ಕೊಡುಗೆಗಳನ್ನು ನಾವು ಮರೆಯಲು ಸಾಧ್ಯವಿಲ್ಲ ಎಂದರು. ಪ್ರಧಾನಿ ಮೋದಿ ಜೊತೆ ಮಹತ್ವದ ಮಾತುಕತೆ ನಡೆಸಲಿರುವ ಶೇಕ್ ಹಸೀನಾ ವಿವಿಧ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.