ರಾಜಸ್ಥಾನದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ, ಹಲ್ಲೆ - ಉದಯಪುರ ಮರ್ಡರ್ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15691086-thumbnail-3x2-wdfdfdf.jpg)
ಉದಯಪುರ(ರಾಜಸ್ಥಾನ): ಹಿಂದೂ ವ್ಯಕ್ತಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ರಾಜಸ್ಥಾನದ ವಿವಿಧ ಪ್ರದೇಶಗಳಲ್ಲಿ ಇಂದು ಪ್ರತಿಭಟನೆ ನಡೆದಿದೆ. ಪ್ರಮುಖವಾಗಿ ಭೀಮ್, ರಾಜ್ ಸಮಂದ್ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆಯಿತು. ಕಿಡಿಗೇಡಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಹರಿತವಾದ ಆಯುಧದಿಂದ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.