ರಂಜಾನ್ ಆಚರಣೆ.. ಮೈಸೂರಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ - ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
🎬 Watch Now: Feature Video
ಮೈಸೂರು: ಎರಡು ವರ್ಷದ ನಂತರ ಮೈಸೂರಿನಲ್ಲಿ ರಂಜಾನ್ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ ಆಚರಣೆಗೆ ನಿರ್ಬಂಧಿಸಲಾಗಿತ್ತು. ಆದ್ರೀಗ ಕೊರೊನಾ ನಿಯಂತ್ರಣದಲ್ಲಿರುವುದರಿಂದ, ಎರಡು ವರ್ಷದ ನಂತರ ಮುಸ್ಲಿಂ ಬಾಂಧವರು ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಮುಸ್ಲಿಂ ಧರ್ಮ ಗುರುಗಳಾದ ಉಸ್ಮಾನ್ ಮೌಲಾನಾ ಅಬ್ದುಲ್ ಪಾಷ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರ ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈದ್ಗ ಮೈದಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು.