ಭಾರಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ: ಮೂವರು ಪಿಡಬ್ಲ್ಯೂಡಿ ಇಂಜಿನಿಯರ್ಗಳು ಸಸ್ಪೆಂಡ್ - ಪಂಜಾಬ್ನ ಹೊಸಿಯಾರ್‌ಪುರ ಜಿಲ್ಲೆ
🎬 Watch Now: Feature Video
ಹೊಸಿಯಾರ್‌ಪುರ (ಪಂಜಾಬ್): ಸುರಿಯುತ್ತಿದ್ದ ಭಾರಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ ಮಾಡಿಸಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಇಂಜಿನಿಯರ್ಗಳು ಸೇರಿ ನಾಲ್ವರನ್ನು ಪಂಜಾಬ್ ಸರ್ಕಾರ ಅಮಾನತುಗೊಳಿಸಿದೆ. ಹೊಸಿಯಾರ್‌ಪುರ ಜಿಲ್ಲೆಯ ಶೇರ್‌ಪುರ್ ಢಕ್ಕನ್ ಗ್ರಾಮದಲ್ಲಿ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದರೂ ಡಾಂಬರೀಕರಣ ಮಾಡುತ್ತಿರುವುದನ್ನು ಕಂಡು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಬ್ಬರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ವೈರಲ್ ಆಗಿ ಭಾರಿ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಪಂಜಾಬ್ ಸರ್ಕಾರ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಾದ ತಾರ್ಸೆಮ್ ಸಿಂಗ್, ವಿಪನ್ ಕುಮಾರ್, ಪ್ರವೀಣ್ ಕುಮಾರ್ ಮತ್ತು ಜಸ್ಬೀರ್ ಸಿಂಗ್ ಎಂಬುವವರನ್ನು ಅಮಾನತು ಮಾಡಿ ಬಿಸಿ ಮುಟ್ಟಿಸಿದೆ.