ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್.. ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ - Etv bharat kannada
🎬 Watch Now: Feature Video

ಡೆಹ್ರಾಡೂನ್(ಉತ್ತರಾಖಂಡ): ನೀರಿನಿಂದ ತುಂಬಿ ಹರಿಯುತ್ತಿದ್ದ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಆಟೋ ಹತ್ತಲು ಹೋದಾಗ ವಿದ್ಯಾರ್ಥಿಗಳಿಬ್ಬರಿಗೆ ವಿದ್ಯುತ್ ಶಾಕ್ ಹೊಡೆದಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಸೇಂಟ್ ಥಾಮನ್ ಶಾಲೆಯ ಪಕ್ಕದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಭಸವಾಗಿ ಮಳೆ ಸುರಿಯುತ್ತಿದ್ದು, ಮಕ್ಕಳು ಆಟೋದಲ್ಲಿ ಕುಳಿತುಕೊಂಡು ಮನೆಗೆ ಹೋಗಲು ಮುಂದಾಗಿದ್ದಾರೆ. ಆಟೋದಲ್ಲಿ ಕುಳಿತುಕೊಳ್ಳುವ ಉದ್ದೇಶದಿಂದ ತುಂಬಿ ಹರಿಯುತ್ತಿದ್ದ ನೀರಿಗೆ ಇಳಿದಾಗ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯುತ್ ತಗುಲಿದೆ. ಈ ವೇಳೆ ವಿದ್ಯಾರ್ಥಿನಿಯೋರ್ವಳು ಕೆಳಗೆ ಬಿದ್ದಿದ್ದಾಳೆ. ಆದರೆ, ಸ್ಥಳೀಯರು ಇವರ ರಕ್ಷಣೆ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.