ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ವಿಧಾನಸೌಧದಲ್ಲಿ ಭೋಜನ ಕೂಟ! - Dinner party at Banquet Hall
🎬 Watch Now: Feature Video
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಗಣನೀಯ ಸೇವೆ ಸಲ್ಲಿಸಿದ 65 ಮಂದಿಗೆ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಅದೇ ರೀತಿ ಇಂದು ಪ್ರಶಸ್ತಿ ಪುರಸ್ಕೃತರಿಗೆ ಸರ್ಕಾರದ ವತಿಯಿಂದಲೇ ಭೋಜನಕೂಟದ ವ್ಯವಸ್ಥೆಯನ್ನು ಏರ್ಪಡಿಸಿತ್ತು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಪ್ರಶಸ್ತಿ ಪುರಸ್ಕೃತರನ್ನು ಬಸ್ ಗಳಲ್ಲಿ ವಿಧಾನಸೌಧಕ್ಕೆ ಮಧ್ಯಾಹ್ನ ಕರೆತರಲಾಯಿತು. ಪ್ರಶಸ್ತಿ ಪುರಸ್ಕೃತರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭೋಜನ ಕೂಟ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸ್ ತಂಡಗಳಿಂದ ಸಂಗೀತ ನುಡಿಸುವ ಮೂಲಕ ಪ್ರಶಸ್ತಿ ಪುರಸ್ಕೃತರನ್ನು ಸ್ವಾಗತಿಸಲಾಯಿತು. ಸಿಎಂ ಯಡಿಯೂರಪ್ಪ, ಸಚಿವರಾದ ಸಿ. ಟಿ. ರವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.