ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆ ಆಗುತ್ತದೆ: ಈಶ್ವರಪ್ಪ ಭರವಸೆ - KS Ishwarappa in Shimoga
🎬 Watch Now: Feature Video
ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಗೆ ಜನ ಪೂರ್ಣ ಬಹುಮತ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇನ್ನೂ ಒಂದು ವಾರದಲ್ಲಿ ಖಂಡಿತ ಸಚಿವ ಸಂಪುಟ ರಚನೆ ಆಗುತ್ತದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ಜನ ಪೂರ್ಣ ಬಹುಮತ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಅಧಿಕಾರ ನೀವು ಮಾಡಿ ಎಂದು ವಾತಾವರಣ ತಂದು 104ಕ್ಕೆ ನಿಲ್ಲಿಸಿದರು. ಪೂರ್ಣ ಬಹುಮತ ಇಲ್ಲದ ಕಾರಣಕ್ಕೆ ಈ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಜೆಡಿಎಸ್ ನಲ್ಲಿದ್ದ ಶಾಸಕರು ಮೈತ್ರಿ ಪಕ್ಷದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಹೋರ ಬಂದಿದಕ್ಕೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಿದೆ. ಅವರ ಋಣ ನಾವು ತೀರಿಸಬೇಕಿದೆ, ಅವರು ಗೆದ್ದು ಬಂದಿದ್ದಾರೆ ಅವರನ್ನು ಮಂತ್ರಿಗಳನ್ನಾಗಿ ಮಾಡಲೇ ಬೇಕು. ಈ ಎಲ್ಲಾ ಅಂಶಗಳನ್ನು ಕೇಂದ್ರದ ನಾಯಕರ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿಗಳು ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ವಿಶ್ವಾಸ ಇದೆ ಎಂದರು.