ಹೊಸಪೇಟೆ.. ದೇಶದ ಅತಿ ಎತ್ತರದ ಧ್ವಜ ಸ್ತಂಭದಲ್ಲಿ ರಾರಾಜಿಸುತ್ತಿರುವ ತ್ರಿವರ್ಣ - ndependence day

🎬 Watch Now: Feature Video

thumbnail

By

Published : Aug 15, 2022, 1:00 PM IST

ವಿಜಯನಗರ: ಸ್ವಾತಂತ್ರ್ಯ ಮಹೋತ್ಸವದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ದೇಶದ ಅತಿ ಎತ್ತರದ ಧ್ವಜ ಸ್ತಂಭದಲ್ಲಿ ತ್ರಿವರ್ಣ ರಾರಾಜಿಸುತ್ತಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ಧ್ವಜಸ್ತಂಭ ಇದ್ದಾಗಿದ್ದು, 6 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ 80/120 ಅಡಿಯ ರಾಷ್ಟ್ರಧ್ವಜ ಹಾರಾಡುತ್ತಿದ್ದು, ನೋಡುಗರನ್ನು ಕೈ ಬೀಸಿ ಕರೆಯುತ್ತಿದೆ. ಇಂದು ಬೆಳಗಿನ ಜಾವ ಸಚಿವ ಆನಂದ ಸಿಂಗ್ ಅವರ ಸಮ್ಮುಖದಲ್ಲಿ ಪ್ರಾಯೋಗಿಕವಾಗಿ ಧ್ವಜಾರೋಹಣ ಮಾಡಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.