ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮನೆ.. ಸಜೀವ ಸಮಾಧಿಯಾದ ಮಗು!
🎬 Watch Now: Feature Video
ಪಲ್ನಾಡು(ಆಂಧ್ರಪ್ರದೇಶ): ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ತಗುಲಿ ಎರಡು ವರ್ಷದ ಮಗು ಸಜೀವ ದಹನವಾಗಿರುವ ಘಟನೆ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆ ಮಂಡಲದ ರಾವಿಪಾಡು ಎಂಬಲ್ಲಿ ನಡೆದಿದೆ. ಬುಧವಾರ ಮಧ್ಯರಾತ್ರಿ ಎಸ್ಸಿ ಕಾಲೋನಿಯಲ್ಲಿ ವಿದ್ಯುತ್ ತಂತಿ ತಗುಲಿರುವ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬಾಲಕನ ಮೃತದೇಹ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಏರಿಯಾ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.