ಪ್ರಜ್ಞೆತಪ್ಪಿದ ವ್ಯಕ್ತಿ ರಕ್ಷಿಸಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್.. ಸಾಥ್ ನೀಡಿದ ಎಎಸ್‌ಪಿ
🎬 Watch Now: Feature Video
ತುಮಕೂರು: ಟೌನ್‌ಹಾಲ್‌ನ ರಸ್ತೆಯಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ವ್ಯಕ್ತಿಗೆ ಪೊಲೀಸರು ನೆರವಾದರು. ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬಳಿ ರಸ್ತೆ ದಾಟಲು ಬಂದ ಪಾದಚಾರಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಬಂದೋಬಸ್ತ್ನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ರಾಘವೇಂದ್ರ ಅವರು ಹಾಗೂ ಇದೇ ವೇಳೆಗೆ ಸ್ಥಳಕ್ಕಾಗಮಿಸಿದ ಎಎಸ್‌ಪಿ ಉದೇಶ್, ಪ್ರಜ್ಞೆ ತಪ್ಪಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.