ಶಾಸಕ ಜಮೀರ್ ಅಹಮದ್ ವಿರುದ್ಧ ಒಕ್ಕಲಿಗ ಸಮುದಾಯದ ಪ್ರತಿಭಟನೆ: ವಿಡಿಯೋ - vokkaliga organisations protest against jameer ahmad at mysore
🎬 Watch Now: Feature Video
ಮೈಸೂರು : ಶಾಸಕ ಜಮೀರ್ ಅಹಮದ್ ಒಕ್ಕಲಿಗ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಖಂಡಿಸಿ ಮೈಸೂರಿನ ಗಾಂಧಿವೃತ್ತದ ಬಳಿ ವಿವಿಧ ಒಕ್ಕಲಿಗ ಸಂಘಟನೆಗಳು, ಸಂಘಟನೆಯ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ರಾಜಕೀಯ ಕಾರಣಕ್ಕಾಗಿ ಮತ್ತು ಕೆಲವರ ಓಲೈಕೆಗಾಗಿ ಜಮೀರ್ ಅಹಮದ್ ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಇದನ್ನು ಒಕ್ಕಲಿಗ ಸಂಘಟನೆಗಳು ಖಂಡಿಸುತ್ತವೆ. ಕೂಡಲೇ ಜಮೀರ್ ಅಹಮದ್ ಸಮುದಾಯದ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಮೈಸೂರು ನಗರದ ವಿವಿಧ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು.