ಸ್ಕೂಟಿ-ಕಾರು ನಡುವೆ ಡಿಕ್ಕಿ... ಕೆಳಕ್ಕೆ ಹಾರಿ ಬಿದ್ದ ಯುವತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಅಫಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
🎬 Watch Now: Feature Video
ಸ್ಕೂಟಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೂಡಿಗೆರೆ ನಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆಯ ಒಂದು ಬದಿಯಿಂದ ಸ್ಕೂಟಿಯಲ್ಲಿ ಯುವತಿ ಬರುತ್ತಿದ್ದ ವೇಳೆ ಮುಂಭಾಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಬೈಕ್ ಚಾಲನೆ ಮಾಡುತ್ತಿದ್ದ ಯುವತಿ ಸ್ಕೂಟಿ ಮೇಲಿಂದ ಹಾರಿ ನೆಲಕ್ಕೆ ಉರುಳಿ ಬಿದ್ದಿದ್ದಾಳೆ.