ಪುತ್ತೂರಿನಲ್ಲಿ ಅದ್ಧೂರಿ ಮೊಸರು ಕುಡಿಕೆ ಉತ್ಸವ - ವಿಡಿಯೋ
🎬 Watch Now: Feature Video
ಪುತ್ತೂರು: ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಸಹಯೋಗದಲ್ಲಿ 12ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವವು ನಗರದ ಮುಖ್ಯರಸ್ತೆಯಲ್ಲಿ ಆಕರ್ಷಕ ಶೋಭಾಯಾತ್ರೆಯೊಂದಿಗೆ ಜರುಗಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಧ್ವಜ ಹಸ್ತಾಂತರಿಸುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು. ನರೇಶ್ ಮತ್ತು ಬಳಗ ಬ್ರಹ್ಮನಗರ ಪ್ರಥಮವಾಗಿ ಅಟ್ಟಿ ಮಡಿಕೆ ಒಡೆದರು.