ಸ್ಟಂಟ್ ಮಾಡಲು ಹೋಗಿ ಉಕ್ಕಿ ಹರಿಯುತ್ತಿದ್ದ ನದಿಗೆ ಜಿಗಿದ ಯುವಕ.. ನೀರಿನ ಸೆಳೆತಕ್ಕೆ ಸಿಲುಕಿ ಸಾವು!? - ಉಕ್ಕಿ ಹರಿಯುತ್ತಿದ್ದ ನದಿಗೆ ಜಿಗಿದ ವ್ಯಕ್ತಿ

🎬 Watch Now: Feature Video

thumbnail

By

Published : Jul 15, 2022, 3:22 PM IST

ಮಾಲೆಗಾಂವ್(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ ಜೋರಾಗಿದ್ದು, ಬಹುತೇಕ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಇದರ ಮಧ್ಯೆ ಸ್ಟಂಟ್ ಮಾಡುವ ಉದ್ದೇಶದಿಂದ ಯುವಕನೊಬ್ಬ ಗಿರ್ನಾ ನದಿಗೆ ಜಿಗಿದು, ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಗಿರ್ನಾ ನದಿಯ ಸೇತುವೆ ಮೇಲಿಂದ ಜಿಗಿದಿದ್ದು, ನಾಪತ್ತೆಯಾಗಿದ್ದಾನೆ. ಯುವಕನ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ನಾಪತ್ತೆಯಾಗಿರುವ ಈತನಿಗೋಸ್ಕರ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದು, ಇಲ್ಲಿಯವರೆಗೆ ಆತನ ಸುಳಿವು ಮಾತ್ರ ಸಿಕ್ಕಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.