ETV Bharat / bharat

ಕೋಟಾದಲ್ಲಿ ಮುಂದುವರಿದ ಸಾವಿನ ಸರಣಿ: ಬಿಹಾರದ 16 ವರ್ಷದ ವಿದ್ಯಾರ್ಥಿ ಶವವಾಗಿ ಪತ್ತೆ - IIT JEE STUDENT DEATH

ಐಐಟಿ-ಜೆಇಇಗೆ ತಯಾರಿ ನಡೆಸುತ್ತಿದ್ದ ಬಿಹಾರದ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

16-year-old student from Bihar found hanging from ceiling fan in Kota
ಕೋಟಾದಲ್ಲಿ ಮುಂದುವರಿದ ಸಾವಿನ ಸರಣಿ: ಬಿಹಾರದ 16 ವರ್ಷದ ವಿದ್ಯಾರ್ಥಿ ಶವವಾಗಿ ಪತ್ತೆ (ETV Bharat)
author img

By PTI

Published : 3 hours ago

ಕೋಟಾ, ರಾಜಸ್ಥಾನ: ಐಐಟಿ-ಜೆಇಇಗೆ ತಯಾರಿ ನಡೆಸುತ್ತಿದ್ದ ಬಿಹಾರದ 16 ವರ್ಷದ ಬಾಲಕ ಕೋಟಾ ನಗರದ ವಿಜ್ಞಾನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಸ್ಟೆಲ್ ಕೊಠಡಿಯಲ್ಲಿನ ಫ್ಯಾನ್‌ನಲ್ಲಿ ಆತ್ಮಹತ್ಯೆ ತಡೆಯುವ ಆ್ಯಂಟಿ ಹ್ಯಾಂಗಿಂಗ್ ಸಾಧನವನ್ನು ಅಳವಡಿಸಲಾಗಿದ್ದರೂ ಈ ಘಟನೆ ಸಂಭವಿಸಿದೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕೊಠಡಿಯಿಂದ ಯಾವುದೇ ಡೆತ್​ ನೋಟ್ ಪತ್ತೆಯಾಗಿಲ್ಲ ಮತ್ತು ಅಪ್ರಾಪ್ತ ವಯಸ್ಕನ ಈ ನಿರ್ಧಾರದ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ವೈಶಾಲಿ ಜಿಲ್ಲೆಯ 11 ನೇ ತರಗತಿಯಲ್ಲಿ ಓದುತ್ತಿರುವ 16 ವರ್ಷದ ಬಾಲಕ, ಈ ವರ್ಷದ ಏಪ್ರಿಲ್‌ನಿಂದ ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಐಐಟಿ-ಜೆಇಇಗೆ ತಯಾರಿ ನಡೆಸುತ್ತಿದ್ದ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಮುಖೇಶ್ ಮೀನಾ ತಿಳಿಸಿದ್ದಾರೆ.

ಬಾಲಕ ಶುಕ್ರವಾರ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕೋಟಾದಲ್ಲಿ ಈ ವರ್ಷ ಜನವರಿಯಿಂದ ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ 17 ನೇ ಪ್ರಕರಣ ಇದಾಗಿದೆ. 2023 ರಲ್ಲಿ 26 ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಇದನ್ನು ಓದಿ: ರೈಲಿನ ಮೇಲೆ ಹತ್ತಿ ಹೈವೋಲ್ಟೇಜ್ ಲೈನ್ ಮುಟ್ಟಿದ ವ್ಯಕ್ತಿ: ಭಾರಿ ಸ್ಫೋಟ

ಆತ್ಮಹತ್ಯೆ ಪರಿಹಾರವಲ್ಲ; ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).

ETV Bharat Logo

Copyright © 2024 Ushodaya Enterprises Pvt. Ltd., All Rights Reserved.