ರೂರ್ಕೆಲಾ (ಓಡಿಶಾ): ವ್ಯಾನ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಓಡಿಶಾದ ಸುಂದರ್ಘರ್ ಜಿಲ್ಲೆಯ ಹೆಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಸುಕಿನ ಜಾವ 2 ಗಂಟೆಯ ಸುಮಾರಿಗೆ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಜು ಕವಿದ ಪರಿಣಾ ಸರಿಯಾಗಿ ರಸ್ತೆ ಕಾಣದೆ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಕೀರ್ತನೆ ತಂಡದ ಸದಸ್ಯರ ದುರ್ಮರಣ: ಕೀರ್ತನೆ ತಂಡದ ಸದಸ್ಯರು ಧಾರ್ಮಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ತೆರಳುವಾಗ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿ ತೀವ್ರತೆಗೆ ವ್ಯಾನ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದ ಸುದ್ದಿ ಅರಿತ ಸ್ಥಳೀಯರು ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಜೊತೆಗೆ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆಸ್ಪತ್ರೆಗೆ ದಾಖಲಿಸಿದರು. ಆದರೆ 7 ಜನರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮತ್ತು ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದೇವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದೇವೆ. ಅಪಘಾತಕ್ಕೆ ಕಾರಣವೇನು ಎಂಬುದು ಪತ್ತೆ ಹಚ್ಚಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದೀಪಾವಳಿ ಸಂಭ್ರಮ ಕಿತ್ತುಕೊಂಡ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸಾವು
ದೀಪಾವಳಿ ದಿನ ಸೂತಕ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಕಮಲಾನಗರದ ಉದ್ಯಮಿ ಅನುಜ್ ಅಗರ್ವಾಲ್ ಅವರ ಕುಟುಂಬ ಸದಸ್ಯರು ಮೃತಪಟ್ಟವರು.
ದೀಪಾವಳಿ ಹಬ್ಬದ ಅಂಗವಾಗಿ ಶುಕ್ರವಾರ ಬೆಳಗ್ಗೆ ಕುಟುಂಬ ಸಮೇತ ಬುಲಂದ್‌ಶಹರ್‌ನ ಬೈಲೋನ್‌ವಾಲಿ ಮಾತಾ ದೇವಸ್ಥಾನಕ್ಕೆ ತೆರಳಿದ್ದರು. ದರ್ಶನದ ಬಳಿಕ ಪುನಃ ಆಗ್ರಾಕ್ಕೆ ಹಿಂತಿರುಗುತ್ತಿತ್ತು. ಈ ವೇಳೆ ಆಗ್ರಾ - ಅಲಿಗಢ ಹೆದ್ದಾರಿಯಲ್ಲಿ ಅತಿವೇಗದಲ್ಲಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಗಾಳಿಯಲ್ಲಿ ಸುಮಾರು ಏಳು ಅಡಿಗಳಷ್ಟು ಹಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ 15 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತದ ದೃಶ್ಯ ಬಹಳ ಭೀಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Watch.. ನಾಗರಹಾವಿನ ಮೇಲೆ ಎರಗಿದ ನಾಯಿಗಳು: ಒಂದು ಬಾಲ ಹಿಡಿದರೆ ಮತ್ತೊಂದು ತಲೆ ಕಚ್ಚಿ ಹಿಡಿದ ಶ್ವಾನಗಳು