ETV Bharat / bharat

ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ: 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ - 8 NAXALITES KILLED

ಛತ್ತೀಸ್‌ಗಢದ ನಾರಾಯಣಪುರದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ದಾಳಿಯಲ್ಲಿ ಹಲವು ನಕ್ಸಲರು ಹತರಾಗಿರುವುದಾಗಿ ಭದ್ರತಾ ಪಡೆಗಳು ಹೇಳಿಕೊಂಡಿವೆ. ನಕ್ಸಲರು ಬೀಡು ಬಿಟ್ಟಿರುವ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಈಗಲೂ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆಸಿವೆ.

NAXAL OPERATION
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Jun 15, 2024, 2:20 PM IST

ಬಸ್ತಾರ್ (ಛತ್ತೀಸ್‌ಗಢ): ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಹಲವು ನಕ್ಸಲರು ಹತ್ಯೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರದೇಶದಲ್ಲಿ ಈಗಲೂ ಭದ್ರತಾ ಪಡೆಗಳು ತಮ್ಮ ಶೋಧ ಕಾರ್ಯಾಚರಣೆ ಮುಂದುವರೆಸಿವೆ.

ಶನಿವಾರ ಬೆಳಗ್ಗೆ ಅಬುಜ್ಮದ್ ಅರಣ್ಯದಲ್ಲಿ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಗುಂಡಿನ ಚಕಮಕಿಯಲ್ಲಿ ಈವರೆಗೆ ಎಂಟು ನಕ್ಸಲರು ಹತ್ಯೆಯಾಗಿದ್ದಾರೆ. ಇದೇ ವೇಳೆ, ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಭದ್ರತಾ ಪಡೆಯ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ನಾರಾಯಣಪುರದ ಅಬುಜ್ಮದ್​​ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಇದೇ ರೀತಿಯ ಗುಂಡಿನ ಚಕಮಕಿ ನಡೆಯುತ್ತಿದೆ. ಶುಕ್ರವಾರ ಬೆಳಗ್ಗೆ ಆರಂಭವಾಗಿರುವ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿ ಶನಿವಾರವೂ ಮುಂದುವರೆದಿದೆ. ಬಸ್ತಾರ್, ನಾರಾಯಣಪುರ, ಕೊಂಡಗಾಂವ್, ದಂತೇವಾಡ ಪ್ರದೇಶದಲ್ಲಿ ಬೀಡುಬಿಟ್ಟಿರುವ ನಕ್ಸಲರು ಮಧ್ಯೆ ಮಧ್ಯೆ ಗುಂಡಿನ ದಾಳಿ ನಡೆಸುತ್ತಿದ್ದು, ಭದ್ರತಾ ಪಡೆ ಪ್ರತಿದಾಳಿ ನಡೆಸಿದೆ.

ನಾಲ್ಕು ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ - ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53 ನೇ ಬೆಟಾಲಿಯನ್‌ನ ಸಿಬ್ಬಂದಿಯನ್ನೊಳಗೊಂಡ ಕಾರ್ಯಾಚರಣೆಯನ್ನು ಜೂನ್ 12 ರಂದು ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) 53ನೇ ಬೆಟಾಲಿಯನ್‌ನ ಸಿಬ್ಬಂದಿಯನ್ನು ಒಳಗೊಂಡಂತೆ ನಾರಾಯಣಪುರ ಜಿಲ್ಲೆಯ ಅಬುಜ್ಮದ್​​ನ ಕುತುಲ್, ಫರ್ಸಬೇಡ ಮತ್ತು ಕೊಡಮೇಟಾ ಪ್ರದೇಶದಲ್ಲಿ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಆಯೋಜಿಸಲಾಗಿದೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ. ತಿಳಿಸಿದ್ದಾರೆ.

ಜೂನ್ 7 ರಂದು ದಾಂತೇವಾಡ ಮತ್ತು ನಾರಾಯಣಪುರ ಗಡಿಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ದಾಳಿಯಲ್ಲಿ 7 ಹಾರ್ಡ್‌ಕೋರ್ ನಕ್ಸಲೀಯರು ಹತರಾಗಿದ್ದರು. ಶೋಧದ ವೇಳೆ ಯೋಧರು ಹತರಾದ ನಕ್ಸಲೀಯರಿಂದ ಅಪಾರ ಪ್ರಮಾಣದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿದ್ದರು.

ಇದನ್ನೂ ಓದಿ: ಛತ್ತೀಸ್​ಗಢದಲ್ಲಿ ಮುಂದುವರಿದ ನಕ್ಸಲ್​ ನಿಗ್ರಹ ಕಾರ್ಯಾಚರಣೆ; ಮಹಿಳೆ ಸೇರಿ ಮತ್ತಿಬ್ಬರ ಹತ್ಯೆ, 10 ನಕ್ಸಲರ ಶರಣಾಗತಿ - Naxalites killed in Encounter

ETV Bharat Logo

Copyright © 2024 Ushodaya Enterprises Pvt. Ltd., All Rights Reserved.