ETV Bharat / bharat

ತನ್ನ ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ: ಮನೆಯಿಂದ ದುರ್ವಾಸನೆ ಬಂದಾಗ ಪ್ರಕರಣ ಬೆಳಕಿಗೆ! - Father Suicide With Four Daughters - FATHER SUICIDE WITH FOUR DAUGHTERS

ದೆಹಲಿಯಲ್ಲಿ ದುರಂತ ಘಟನೆಯೊಂದು ನಡೆದಿದೆ. ತಂದೆಯೊಬ್ಬ ತನ್ನ ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

DELHI SUICIDE CASE  5 FAMILY MEMBER SUICIDE  SUICIDE IN RANGPURI DELHI  DELHI SUICIDE NEWS
ತನ್ನ ನಾಲ್ವರು ವಿಶೇಷಚೇತನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ (ETV Bharat)
author img

By ETV Bharat Karnataka Team

Published : Sep 28, 2024, 8:34 AM IST

Updated : Sep 28, 2024, 12:19 PM IST

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದುರಂತವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ನಾಲ್ವರು ಪುತ್ರಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ.

ಮನಕಲುಕುವ ಘಟನೆ: ತಂದೆಯೊಬ್ಬರು ತನ್ನ ನಾಲ್ವರು ವಿಕಲಚೇತನ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಕ್ಕಳ ತಾಯಿ ಈಗಾಗಲೇ ಕ್ಯಾನ್ಸರ್​ನಿಂದ ಸಾವನ್ನಪ್ಪಿದ್ದರು. ಶುಕ್ರವಾರ ತಡರಾತ್ರಿ ಪೊಲೀಸರು ಮನೆಯ ಬೀಗ ಒಡೆದು ಎಲ್ಲಾ ಶವಗಳನ್ನು ಹೊರತೆಗೆದಿದ್ದಾರೆ. ಹೆಣ್ಣು ಮಕ್ಕಳನ್ನು ಪೋಷಿಸಲಾಗದ ಕಾರಣ ತಂದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ: ಮಾಹಿತಿಯ ಪ್ರಕಾರ, ತಂದೆಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಅವರು ರಂಗಪುರಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮೂಲತಃ ಬಿಹಾರದ ಛಪ್ರಾ ಜಿಲ್ಲೆಯ ನಿವಾಸಿ. ಅವರಿಗೆ ನಾಲ್ವರು ಹೆಣ್ಣು ಮಕ್ಕಳಿದ್ದರು. ವಸಂತ್ ಕುಂಜ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅವರ ಮಹಡಿಯಿಂದ ದುರ್ವಾಸನೆ ಬರಲು ಪ್ರಾರಂಭಿಸಿದ ನಂತರ, ನೆರೆಹೊರೆಯವರು ಘಟನೆಯ ಬಗ್ಗೆ ಮನೆಯ ಮಾಲೀಕರಿಗೆ ತಿಳಿಸಿದ್ದರು. ಬಳಿಕ ಪೊಲೀಸರಿಗೆ ತಿಳಿಸಿದ್ದರು.

ಕುಟುಂಬಸ್ಥರಿಗೆ ಮಾಹಿತಿ ರವಾನೆ: ಪೊಲೀಸರು ಮಹಡಿಯ ಬಾಗಿಲು ಒಡೆದು ನೋಡಿದಾಗ ಒಳಗೆ ಐದು ಶವಗಳು ಪತ್ತೆಯಾಗಿವೆ. ಎರಡ್ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿ ಮೂರ್ನಾಲ್ಕು ದಿನಗಳಿಂದ ಜನರ ಕಣ್ಣಿಗೆ ಕಂಡಿರಲಿಲ್ಲ. ಹಾಗಾಗಿ ಆತನ ಸಹೋದರನಿಗೆ ಮಾಹಿತಿ ನೀಡಲಾಗಿತ್ತು. ಘಟನಾ ಸ್ಥಳದಿಂದ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಘಟನೆಯ ನಂತರ ಸ್ಥಳೀಯ ಪೊಲೀಸರೊಂದಿಗೆ ವಿಧಿವಿಜ್ಞಾನ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ. ಎಲ್ಲಾ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲು: ಪೊಲೀಸರು ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿವರವನ್ನು ಕಲೆ ಹಾಕುತ್ತಿದ್ದಾರೆ.

(ನಿಮ್ಮಲ್ಲಿ ಆತ್ಮಹತ್ಯೆಯ ಆಲೋಚನೆಗಳಿದ್ದರೆ ಅಥವಾ ನೀವು ತೀವ್ರ ಚಿಂತೆ, ಭಯಕ್ಕೆ ಒಳಗಾಗಿದ್ದರೆ ಅಥವಾ ನಿಮಗೆ ಭಾವನಾತ್ಮಕ ಬೆಂಬಲ ಬೇಕಿದ್ದರೆ ಸ್ನೇಹ ಫೌಂಡೇಶನ್ - 04424640050 (24x7 ಲಭ್ಯವಿದೆ) ಅಥವಾ ಐಕಾಲ್, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಹಾಯವಾಣಿ - 9152987821 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8ರಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ.)

ಓದಿ: ವಿದ್ಯಾರ್ಥಿನಿಯರ ಖಾಸಗಿತನಕ್ಕೆ ಧಕ್ಕೆ: ಪಟಿಯಾಲ ಕಾನೂನು ವಿವಿ ಉಪಕುಲಪತಿ ವಿರುದ್ಧ ಪ್ರತಿಭಟನೆ, ಆರೋಪ ತಳ್ಳಿಹಾಕಿದ ವಿಸಿ - Students Protest

Last Updated : Sep 28, 2024, 12:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.