ETV Bharat / bharat

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ₹20 ಲಕ್ಷ, ಗಾಯಗೊಂಡವರಿಗೆ ₹3 ಲಕ್ಷ ಪರಿಹಾರ ಘೋಷಣೆ - Minister has announced Compensation - MINISTER HAS ANNOUNCED COMPENSATION

ROOF COLLAPSED AT IGI: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿ ಕುಸಿದು ಅವಘಡ ಸಂಭವಿಸಿದೆ. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, ಮೃತರ ಕುಟುಂಬಕ್ಕೆ ₹20 ಲಕ್ಷ ಮತ್ತು ಗಾಯಗೊಂಡವರಿಗೆ ₹3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

DELHI IGI AIRPORT ACCIDENT  ROOF COLLAPSED AT IGI T1  ROOF COLLAPSED AT IGI  DELH
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ₹20 ಲಕ್ಷ, ಗಾಯಗೊಂಡವರಿಗೆ ₹3 ಲಕ್ಷ ಪರಿಹಾರ ಘೋಷಣೆ (ETV Bharat / ANI)
author img

By ETV Bharat Karnataka Team

Published : Jun 28, 2024, 11:28 AM IST

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿ ಕುಸಿದು ಭಾರಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, ಮೃತರ ಕುಟುಂಬಕ್ಕೆ ₹20 ಲಕ್ಷ ಮತ್ತು ಗಾಯಗೊಂಡವರಿಗೆ ₹3 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

''ಪರ್ಯಾಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಅಥವಾ ನಿಯಮಗಳ ಅಡಿ ಸಂಪೂರ್ಣ ಮರುಪಾವತಿ ಒದಗಿಸಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ'' ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಟರ್ಮಿನಲ್ 3 ಮತ್ತು ಟರ್ಮಿನಲ್ 2ರಲ್ಲಿ ಎಲ್ಲಾ ವಿಮಾನಗಳು ಸಂಪೂರ್ಣವಾಗಿ ಕಾರ್ಯಾಚರಣೆ ನಡೆಸುತ್ತವೆ. ಟರ್ಮಿನಲ್ 1ರಿಂದ ಹೊರಡುವ ವಿಮಾನಗಳನ್ನು ಇಂದು (ಶುಕ್ರವಾರ) ಮಧ್ಯಾಹ್ನ 2 ಗಂಟೆಯವರೆಗೆ ರದ್ದುಗೊಳಿಸಲಾಗಿದೆ ಎಂದು ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ಹೇಳಿದೆ.

ಇಂಡಿಗೋ ಮತ್ತು ಸ್ಪೈಸ್‌ಜೆಟ್ ಟರ್ಮಿನಲ್ 1ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಟರ್ಮಿನಲ್‌ನ ಮೇಲ್ಚಾವಣಿ ಕುಸಿದ ನಂತರ 6 ಜನರು ಅವಶೇಷಗಳಡಿಯಲ್ಲಿ ಸಿಲುಕಿದ್ದರು. ಅವರನ್ನು ಸ್ಥಳಾಂತರಿಸಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಮಿನಲ್ 1 ತಾತ್ಕಾಲಿಕವಾಗಿ ರದ್ದು: "ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಕುಸಿದಿರುವ ಹಿನ್ನೆಲೆ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಪ್ರಯಾಣಿಕರಿಗೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ. ಈ ಘಟನೆಯ ನಂತರ ಟರ್ಮಿನಲ್ 1 ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್ - ಇನ್ ಕೌಂಟರ್‌ಗಳನ್ನು ಸದ್ಯ ಬಂದ್​ ಮಾಡಲಾಗಿದೆ. ಇದರಿಂದ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ" ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ಹೇಳಿದ್ದಾರೆ.

ಟರ್ಮಿನಲ್ 1 ಕುಸಿದಿದ್ದು ಹೇಗೆ?: ಶುಕ್ರವಾರ ಮುಂಜಾನೆ ಎಡೆಬಿಡದೇ ಸುರಿದ ಮಳೆಯಿಂದಾಗಿ ಐಜಿಐ ವಿಮಾನ ನಿಲ್ದಾಣದ ಟಿ-1 ರ ಮೇಲ್ಚಾವಣಿ ಕುಸಿದಿದೆ. ಅಲ್ಲಿ ನಿಂತಿದ್ದ ಕಾರು ಮತ್ತು ಟ್ಯಾಕ್ಸಿ ಜಖಂಗೊಂಡಿವೆ. ಘಟನೆಯ ಬಗ್ಗೆ ಪೊಲೀಸ್ ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳದಿಂದ ಬಂದ ಮಾಹಿತಿಯ ಪ್ರಕಾರ, ಬೆಳಗ್ಗೆ 5.30ರ ಸುಮಾರಿಗೆ ಕರೆ ಬಂದಿತು. ನಂತರ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಧಾವಿಸಿವೆ. ಇತರ ಇಲಾಖೆಗಳ ತಂಡಗಳೂ ಸ್ಥಳದಲ್ಲಿ ಬೀಡುಬಿಟ್ಟಿವೆ.

ಇದನ್ನೂ ಓದಿ: ಮಳೆ ಅಬ್ಬರಕ್ಕೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್​ನ ಕುಸಿತ: ಓರ್ವ ಸಾವು, ನಾಲ್ವರಿಗೆ ಗಂಭೀರವಾಗಿ ಗಾಯ - Airport Terminal roof collapsed

ETV Bharat Logo

Copyright © 2025 Ushodaya Enterprises Pvt. Ltd., All Rights Reserved.