ETV Bharat / bharat

ಕೋಟಾದಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ: ಇದು ವರ್ಷದ 16ನೇ ಪ್ರಕರಣ​! - JEE STUDENT SUICIDE

ರಾಜಸ್ಥಾನದ ಕೋಟಾದಲ್ಲಿ ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮಧ್ಯ ಪ್ರದೇಶದ ವಿದ್ಯಾರ್ಥಿ ತನ್ನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By PTI

Published : Nov 24, 2024, 10:20 AM IST

Updated : Nov 24, 2024, 12:59 PM IST

ಕೋಟಾ(ರಾಜಸ್ಥಾನ): ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ತನ್ನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಯ ಕೊಠಡಿಯಲ್ಲಿ ಯಾವುದೇ ಡೆತ್​ ನೋಟ್​ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯ ಪ್ರದೇಶದ ಅಣ್ಣುಪುರದ ನಿವಾಸಿ ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಏಪ್ರಿಲ್​ನಿಂದ ಇಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ. ಮಧ್ಯರಾತ್ರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

"ವಿವೇಕ್​ನನ್ನು​ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ತನಿಖೆಗೆ ವಸತಿ ನಿಲಯಕ್ಕೆ ಫೊರೆನ್ಸಿಕ್ ತಂಡ ಕಳುಹಿಸಲಾಗಿದೆ. ಪೋಷಕರು ಬಂದ ನಂತರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಅವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು" ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಶರ್ಮಾ ತಿಳಿಸಿದರು.

ಕೋಟಾದಲ್ಲಿ ಈ ವರ್ಷ ಜನವರಿಯಿಂದ ಇದು 16ನೇ ಆತ್ಮಹತ್ಯೆ ಪ್ರಕರಣವಾಗಿದ್ದು, ಕಳೆದ ವರ್ಷ ನಗರದಲ್ಲಿ ಇಂತಹ 26 ಪ್ರಕರಣಗಳು ವರದಿಯಾಗಿದ್ದವು.

ಇದನ್ನೂ ಓದಿ: ಆಟೋಗೆ ಸರ್ಕಾರಿ ಬಸ್​ ಡಿಕ್ಕಿ: 7 ಮಂದಿ ಕೂಲಿ ಕಾರ್ಮಿಕರು ಸಾವು, ₹5 ಲಕ್ಷ ಪರಿಹಾರ ಘೋಷಣೆ

Last Updated : Nov 24, 2024, 12:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.