ETV Bharat / bharat

ಜಮ್ಮು- ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚಿಂತನೆ: ಅಮಿತ್​ ಶಾ - AFSPA Removal from Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ರದ್ದುಗೊಳಿಸುವ ಸುಳಿವು ನೀಡಿದ ಅಮಿತ್​ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚಿಂತನೆ: ಅಮಿತ್​ ಶಾ

author img

By ETV Bharat Karnataka Team

Published : Mar 28, 2024, 9:27 PM IST

ಶ್ರೀನಗರ ( ಜಮ್ಮು- ಕಾಶ್ಮೀರ): ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ರದ್ದುಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಾಧ್ಯಮ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, AFSPA ರದ್ದುಗೊಳಿಸುವುದರ ಜೊತೆಗೆ ಜಮ್ಮು ಮತ್ತು ಕಾಶ್ಮೀರದಿಂದ ಸೇನೆ ಹಿಂತೆಗೆದುಕೊಂಡು ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ವಹಿಸಲು ಯೋಜಿಸುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಅರೆಸೇನಾ ಪಡೆಗಳ ಸಹಯೋಗದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆಯೂ ಹಲವು ಪ್ರಮುಖ ಕಾರ್ಯಾಚರಣೆಗಳ ನೇತೃತ್ವ ವಹಿಸಿದ್ದಾರೆ.

ಹಾಗಾಗಿ ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಿಂದ ಸೇನೆ ಹಿಂಪಡೆಯಲಾಗುತ್ತದೆ. ಅಲ್ಲದೇ ಸೇನೆಯನ್ನು ಹಿಂತೆಗೆದುಕೊಳ್ಳುವ ಪ್ರದೇಶಗಳಲ್ಲಿ, ದೇಶದ ಅತಿದೊಡ್ಡ ಕೇಂದ್ರೀಯ ಅರೆಸೈನಿಕ ಪಡೆಯಾದ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಆ ಪ್ರದೇಶಗಳನ್ನು ನಿಯಂತ್ರಣಕ್ಕೆ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಸೂಚಿಸಿದರು.

ಇತ್ತೀಚಿನ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕದನ ವಿರಾಮ ಉಲ್ಲಂಘನೆ ಎರಡರಲ್ಲೂ ಗಮನಾರ್ಹ ಕುಸಿತವಾಗಿರುವುದಾಗಿ ಅಂಕಿ - ಅಂಶಗಳು ಬಹಿರಂಗಪಡಿಸುತ್ತವೆ. ಎರಡು ದಶಕಗಳ ಹಿಂದೆ 70 ಕದನ ವಿರಾಮ ಉಲ್ಲಂಘನೆಗಳಾಗಿದ್ದವು, 2023ರಲ್ಲಿ ಕೇವಲ ಎರಡು ಬಾರಿ ಆಗಿತ್ತು. ಅದೇ ರೀತಿ, ಅಕ್ರಮ ಒಳನುಸುಳುವಿಕೆ ಘಟನೆಗಳು ಕೂಡ ಕಡಿಮೆಯಾಗಿವೆ. 2010 ರಲ್ಲಿ 489 ಪ್ರಕರಣಗಳು ದಾಖಲಾಗಿದ್ದವು. ಆದರೇ 2023 ರಲ್ಲಿ ಶೂನ್ಯಕ್ಕೆ ತಲುಪಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ, ರಾಜ್ಯದಲ್ಲಿ ಈ ವರ್ಷದ ಸೆಪ್ಟೆಂಬರ್ ವೇಳೆಗೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಸೇನೆ ಏಕನಾಥ್ ಶಿಂಧೆ ಬಣ ಸೇರ್ಪಡೆ ಆದ ಬಾಲಿವುಡ್​ ಖ್ಯಾತ ನಟ ಗೋವಿಂದ - Actor Govinda join Shiv Sena

ETV Bharat Logo

Copyright © 2024 Ushodaya Enterprises Pvt. Ltd., All Rights Reserved.