ರಜೌರಿ(ಜಮ್ಮು ಮತ್ತು ಕಾಶ್ಮೀರ): ರಜೌರಿ ಜಿಲ್ಲೆಯ ಮಂಜಕೋಟ್ ಪ್ರದೇಶದ ಸೇನಾ ಶಿಬಿರದ ಸಮೀಪ ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಕೋರರ ಪತ್ತೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಹಲವು ಸುತ್ತು ಗುಂಡು ಹಾರಿಸಿದ್ದು, ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ: ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಮಂದಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಕೂಡಾ ಹುತಾತ್ಮರಾಗಿದ್ದಾರೆ.
ಕುಲ್ಗಾಬ್‌ನ ಮತ್ತೊಂದು ಪ್ರದೇಶದಲ್ಲಿ ಉಗ್ರರಿಗೆ ಶೋಧ ನಡೆಯುತ್ತಿದೆ. ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.
ಮೊದರ್ಗಾಂ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮೊದಲ ಎನ್‌ಕೌಂಟರ್ ನಡೆದಿದೆ. ಕೆಲವು ಗಂಟೆಗಳ ನಂತರ, ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ.
ಕಳೆದ ಕೆಲವು ತಿಂಗಳಿನಿಂದ ಕಣಿವೆ ನಾಡಿನಲ್ಲಿ ಭಯೋತ್ಪಾದಕ ಉಪಟಳ ಹೆಚ್ಚುತ್ತಿದೆ.
ಇದನ್ನೂ ಓದಿ: ಗುಜರಾತ್ನಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ - Gujarat Building Collapse