ಆಂಧ್ರ ಪ್ರದೇಶ: "ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಅತ್ತೆ ಮತ್ತು ಸೊಸೆಯ ಮೇಲೆ ಇತ್ತೀಚಿಗೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು 48 ಗಂಟೆಗಳಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವನ ವಿರುದ್ಧ ಅತ್ಯಾಚಾರ ಸೇರಿದಂತೆ 37 ಪ್ರಕರಣಗಳಿವೆ" ಎಂದು ಗೃಹ ಸಚಿವೆ ವಂಗಲಪುಡಿ ಅನಿತಾ ತಿಳಿಸಿದರು.
ತ್ವರಿತಗತಿ ನ್ಯಾಯಾಲಯಕ್ಕೆ ಪ್ರಕರಣ: "ಸಿಎಂ ಆದೇಶದ ಮೇರೆಗೆ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ವಿಧಿಸಲು ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ನಿರ್ಲಕ್ಷಿಸುವುದಿಲ್ಲ. ಅಪರಾಧಗಳನ್ನು ತಗ್ಗಿಸುವುದು ನಮ್ಮ ಮೊದಲ ಆದ್ಯತೆ. ಅಪರಾಧ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ" ಎಂದು ಹೇಳಿದರು.
"ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಸಣ್ಣ ಘಟನೆ ನಡೆದರೂ ಸಿಎಂ ನೇರವಾಗಿ ಅಧಿಕಾರಿಗಳ ಜೊತೆ ಮಾತನಾಡುತ್ತಾರೆ. ಈ ಅತ್ಯಾಚಾರ ಪ್ರಕರಣದ ಕುರಿತು ಸಿಎಂ ಚಂದ್ರಬಾಬು ನಾಯ್ಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ" ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಕರ್ನಾಟಕ ಮೂಲದ ವಲಸಿಗ ಕಾರ್ಮಿಕ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ: ತನಿಖೆ ಚುರುಕು