ಚೆನ್ನೈ, ತಮಿಳುನಾಡು : ತನ್ನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಕೊಟ್ಟೂರುಪುರಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತನ್ನ ಗೆಳೆಯನೊಂದಿಗೆ ಕುಳಿತು ಮಾತನಾಡುತ್ತಿದ್ದಾಗ ಅಲ್ಲಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ತನ್ನೊಂದಿಗಿದ್ದ ಗೆಳೆಯನ ಮೇಲೆ ಹಲ್ಲೆ ಮಾಡಿ ಆತನನ್ನು ಅಟ್ಟಾಡಿಸಿದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ನಂತರ ದುಷ್ಕರ್ಮಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕೊಟ್ಟೂರುಪುರಂ ಸಹಾಯಕ ಪೊಲೀಸ್ ಆಯುಕ್ತ ಭಾರತಿ ರಾಜನ್ ಹೇಳಿದ್ದಾರೆ.
ಇದನ್ನೂ ಓದಿ : ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತ- ಕರ್ನಾಟಕದ ಮೂವರು ಯೋಧರು ನಿಧನ: ಮಣಿಪುರದಲ್ಲಿ ಚಿಕ್ಕೋಡಿ ಸೈನಿಕ ಸಾವು - KARNATAKA SOLDIERS DEATH