ETV Bharat / bharat

ಸ್ವಾಮಿನಾಥನ್​, ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚರಣ್​​​​ ಸಿಂಗ್​ಗೆ ಭಾರತ ರತ್ನದ ಗರಿ

ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಡಾ.ಎಂ.ಎಸ್. ಸ್ವಾಮಿನಾಥನ್ ಹಾಗೂ ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹ ರಾವ್​, ಚೌಧರಿ ಚರಣ್​ ಸಿಂಗ್​ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಾ ಎಂ ಎಸ್ ಸ್ವಾಮಿನಾಥನ್  ಚರಣ್​ ಸಿಂಗ್​ ಪಿ ವಿ ನರಸಿಂಹ ರಾವ್  ಭಾರತ ರತ್ನ  Bharat Ratna Award
ಸ್ವಾಮಿನಾಥನ್​, ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚರಣ್​​​​ ಸಿಂಗ್​ಗೆ ಭಾರತ ರತ್ನದ ಗರಿ
author img

By ETV Bharat Karnataka Team

Published : Feb 9, 2024, 1:02 PM IST

Updated : Feb 9, 2024, 1:56 PM IST

ನವದೆಹಲಿ: ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್, ಚೌಧರಿ ಚರಣ್​ ಸಿಂಗ್​ ಹಾಗೂ ಹಸಿರು ಕ್ರಾಂತಿಯ ಪಿತಾಮಹ ಎಂ ಎಸ್​ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.

ಭಾರತ ಕೃಷಿಯಲ್ಲಿ ಸ್ವಾವಲಂಬನೆಗೆ ಸ್ವಾಮಿನಾಥನ್ ಪಾತ್ರ: ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್​ ಮಾಡಿ ಈ ವಿಷಯ ತಿಳಿಸಿದ್ದಾರೆ. ''ಭಾರತ ಸರ್ಕಾರವು ಡಾ.ಎಂ.ಎಸ್. ಸ್ವಾಮಿನಾಥನ್ ಅವರು ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ನಮ್ಮ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಗಳನ್ನು ಗುರುತಿಸಿ ಅವರಿಗೆ ಭಾರತ ರತ್ನವನ್ನು ನೀಡುತ್ತಿರುವುದು ಅಪಾರ ಸಂತೋಷವನ್ನು ತಂದಿದೆ. ದೇಶ ಅತ್ಯಂತ ಕಷ್ಟದ ಸಮಯದಲ್ಲಿದ್ದಾಗ ಭಾರತವು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಸ್ವಾಮಿನಾಥನ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದ್ದಾರೆ.

''ಭಾರತೀಯ ಕೃಷಿಯನ್ನು ಆಧುನಿಕರಣಗೊಳಸಿ, ರೈತರಿಗೆ ನೆರವಾಗಲು ಅದ್ಬುತವಾದ ಕೆಲಸಗಳನ್ನು ಮಾಡಿದ್ದಾರೆ. ಕೃಷಿ ಕ್ಷೇತ್ರದ ಬೆಳವಣಿಗೆಗೆ ಅವರ ಅಮೂಲ್ಯವಾದ ಸೇವೆಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಲವಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ, ಸಂಶೋಧನೆಗಳಿಗೆ ನೆರವು ನೀಡಿದ್ದಾರೆ. ಡಾ. ಸ್ವಾಮಿನಾಥನ್ ಅವರ ದೂರದೃಷ್ಟಿಯ ಫಲವಾಗಿ ಭಾರತೀಯ ಕೃಷಿಯಲ್ಲಿ ವ್ಯಾಪಕ ಬದಲಾವಣೆಯಾಗಿದೆ. ರಾಷ್ಟ್ರದ ಆಹಾರ ಭದ್ರತೆ ಮತ್ತು ಸಮೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ‘‘ ಎಂದು ಟ್ವೀಟ್​ ಮೂಲಕ ಸ್ವಾಮಿನಾಥನ್ ಅವರನ್ನು ಹೊಗಳಿದ್ದಾರೆ.

ಪಿ ವಿ ನರಸಿಂಹರಾವ್ ಕೊಡುಗೆ ಸ್ಮರಿಸಿದ ಮೋದಿ: ಮತ್ತೊಂದು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ''ನಮ್ಮ ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂಬ ವಿಚಾರ ಹಂಚಿಕೊಳ್ಳಲು ಸಂತಸವಾಗುತ್ತಿದೆ. ಒಬ್ಬ ಪ್ರಖ್ಯಾತ ವಿದ್ವಾಂಸ ಮತ್ತು ರಾಜನೀತಿಜ್ಞರಾಗಿ ನರಸಿಂಹ ರಾವ್ ಅವರು ಭಾರತದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಪಡೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಜನ ಮಾನಸದಲ್ಲಿ ನೆನಪಿನಲ್ಲಿ ಉಳಿಯುವಂತಿದೆ. ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ'' ಎಂದು ಗುಣಗಾನ ಮಾಡಿದ್ದಾರೆ.

''ದೇಶದ ಸಮೃದ್ಧಿ ಮತ್ತು ಬೆಳವಣಿಗೆಗೆ ನರಸಿಂಹರಾವ್​ ಅವರು ಭದ್ರ ಬುನಾದಿ ಹಾಕಿದ್ದಾರೆ. ನರಸಿಂಹ ರಾವ್ ಅವರ ಅಧಿಕಾರಾವಧಿಯಲ್ಲಿ ಭಾರತವು ಜಾಗತಿಕ ಮಾರುಕಟ್ಟೆಗಳಿಗೆ ತೆರೆದುಕೊಂಡಿದ್ದಲ್ಲದೇ, ಆರ್ಥಿಕ ಅಭಿವೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡಿತು. ಇದಲ್ಲದೇ, ಭಾರತದ ವಿದೇಶಾಂಗ ನೀತಿ, ಭಾಷೆ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅವರ ಕೊಡುಗೆಗಳು ಅವಿಸ್ಮರಣೀಯ‘‘ ಎಂದು ಮೋದಿ ಟ್ವೀಟ್​ನಲ್ಲಿ ಬಣ್ಣಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಜೀವನ ಮುಡಿಪಾಗಿಟ್ಟಿ ಚರಣ್ ಸಿಂಗ್: ಮಗದೊಂದು ಟ್ವೀಟ್​ ಮಾಡಿದ ಪ್ರಧಾನಿ ಮೋದಿ ಅವರು, ''ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ ಎಂದು ಹೇಳಿದ್ದಾರೆ.

’’ದೇಶಕ್ಕೆ ಚರಣ್ ಸಿಂಗ್​ ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಣೆ ಮಾಡಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ದೇಶದ ಗೃಹ ಸಚಿವರಾಗಿ ಮತ್ತು ಶಾಸಕರಾಗಿಯೂ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕೆ ತಮ್ಮ ಶ್ರಮ ಹಾಕಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತರಿಗಾಗಿ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ '' ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಇದನ್ನೂ ಓದಿ: ಜೆ.ಪಿ.ನಡ್ಡಾ, ಬಿ.ಎಲ್‌.ಸಂತೋಷ್‌ ಭೇಟಿಯಾದ ಸುಮಲತಾ: ಬಿಜೆಪಿ ಟಿಕೆಟ್‌ ಬಗ್ಗೆ ಚರ್ಚೆ?

Last Updated : Feb 9, 2024, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.