ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಕೇರಾನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನ ವಿಫಲಗೊಳಿಸುವ ಸಂದರ್ಭದಲ್ಲಿ ಸೇನೆಯು ಭಾನುವಾರ ಮೂವರು ಅಪರಿಚಿತ ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಕೊನೆಯ ಮಾಹಿತಿ ಸಿಗುವವರೆಗೂ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ತಿಳಿಸಿದೆ.
ಶ್ರೀನಗರ ಮೂಲದ ಸೇನೆಯ ಚಿನಾರ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಎಕ್ಸ್' ನಲ್ಲಿ, ಕೇರಾನ್ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಶಸ್ತ್ರಾಸ್ತ್ರಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಟ್ವೀಟ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಜಿಲ್ಲೆಯಲ್ಲಿ ಎರಡು ಕಡೆ ಎನ್‌ಕೌಂಟರ್ ನಡೆದಿದೆ. ಕುಲ್ಗಾಮ್‌ನ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಭಯೋತ್ಪಾದಕರೊಂದಿಗೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಎನ್‌ಕೌಂಟರ್‌ನಲ್ಲಿ ಇದುವರೆಗೆ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ಕೌಂಟರ್ ಸೈಟ್‌ನ ಡ್ರೋನ್ ದೃಶ್ಯಗಳಲ್ಲಿ ನಾಲ್ಕು ಮೃತದೇಹಗಳು ಬಿದ್ದಿರುವುದು ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ, ಇನ್ನೂ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಶವಗಳನ್ನು ವಶಪಡಿಸಿಕೊಳ್ಳಲಾಗಿಲ್ಲ. ಎನ್‌ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿ) ವಿ.ಕೆ. ಬಿರ್ಧಿ ಅಭಿಯಾನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಓದಿ: ಜಮ್ಮುವಿನ ಕಥುವಾದಲ್ಲಿ ಭೀಕರ ಉಗ್ರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ - MILITANTS ATTACKED