ETV Bharat / bharat

ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್ ಅರ್ಜಿ - Excise policy scam - EXCISE POLICY SCAM

ವಿವಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್​ ನಿರಾಕರಿಸಿದ ಬೆನ್ನಲ್ಲೆ ಜಾರಿ ನಿರ್ದೇಶನಾಲಯದ (ಇಡಿ) ತಂಡವು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಈ ಬಂಧನ ಪ್ರಶ್ನಿಸಿ ಕೇಜ್ರಿವಾಲ್​ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
author img

By ETV Bharat Karnataka Team

Published : Mar 21, 2024, 10:52 PM IST

Updated : Mar 21, 2024, 11:03 PM IST

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ಬಂಧನದಿಂದ ರಕ್ಷಣೆ ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನ ವಿಭಾಗೀಯ ಪೀಠವು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ ಬಳಿಕ ತಮ್ಮ ಅರ್ಜಿಯ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಇದರ ನಡುವೆಯೇ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ಕೇಜ್ರಿವಾಲ್ ಪರ ಹಿರಿಯ ವಕೀಲ ಎ.ಎಂ ಸಿಂಘ್ವಿ ವಾದ ಮಂಡಿಸುವ ಸಾಧ್ಯತೆಯಿದೆ. ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕ್ರೇಜಿವಾಲ್​ ನಿವಾಸದ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್​ನಲ್ಲಿ ತುರ್ತು ವಿಚಾರಣೆ ಕೋರಿದ್ದಾರೆ. ಇದೇ ವೇಳೆ, ಏಪ್ರಿಲ್ 22 ರಂದು ಹೆಚ್ಚಿನ ಪರಿಗಣನೆಗೆ ಅವರ ಅರ್ಜಿಯನ್ನು ಹೈಕೋರ್ಟ್ ಪಟ್ಟಿ ಮಾಡಿದೆ.

ಕೇಜ್ರಿವಾಲ್​ ಬಂಧನವಾಗುತ್ತಿದ್ದಂತೆ ದೆಹಲಿ ಹಣಕಾಸು ಸಚಿವೆ ಅತಿಶಿ ಮರ್ಲೆನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಇಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ ಎಂಬ ಸುದ್ದಿ ನಮಗೆ ಬಂದಿದೆ. ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಸರ್ಕಾರವನ್ನು ನಡೆಸುತ್ತಾರೆ ಎಂದು ನಾವು ಯಾವಾಗಲೂ ಹೇಳಿದ್ದೇವೆ. ಅವರು ದೆಹಲಿ ಸಿಎಂ ಆಗಿಯೇ ಇರುತ್ತಾರೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದೇವೆ. ನಮ್ಮ ವಕೀಲರು ಸುಪ್ರೀಂ ಕದ ತಟ್ಟಿದ್ದಾರೆ. ಇಂದು ರಾತ್ರಿ ತುರ್ತು ವಿಚಾರಣೆ ನಡೆಸುವಂತೆ ನಾವು ಕೋರ್ಟ್​ಗೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಇಡಿ ಸಮನ್ಸ್‌ನ ಸಿಂಧುತ್ವವನ್ನು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದು, ನಂತರ ಅದನ್ನು ರದ್ದುಗೊಳಿಸಲಾಯಿತು. ಈಗಾಗಲೇ ಈ ಪ್ರಕರಣದಲ್ಲಿ ಇಬ್ಬರು ಪ್ರಮುಖ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಜೈಲಿನಲ್ಲಿದ್ದಾರೆ. ಇದೇ ಹಗರಣದಲ್ಲಿ ಮಾರ್ಚ್ 15 ರಂದು ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಮಾರ್ಚ್ 23ರವರೆಗೆ ಇಡಿ ಕವಿತಾ ಅವರನ್ನು ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ : ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಕೇಜ್ರಿವಾಲ್ ಅರೆಸ್ಟ್ ​ - Excise Policy Case

Last Updated : Mar 21, 2024, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.