ETV Bharat / bharat

ಮಾಜಿ ಸಿಎಂ ಅಶೋಕ್​ ಚವಾಣ್​ ಇಂದೇ ಬಿಜೆಪಿ ಸೇರ್ಪಡೆ; ರಾಜ್ಯಸಭೆಗೆ ನಾಮನಿರ್ದೇಶನ ಸಾಧ್ಯತೆ

author img

By ETV Bharat Karnataka Team

Published : Feb 13, 2024, 11:17 AM IST

ಕಾಂಗ್ರೆಸ್​ ತೊರೆದಿರುವ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್​ ಚವಾಣ್​ ಅವರು ಇಂದು ಬಿಜೆಪಿ ಸೇರುವ ಸಾಧ್ಯತೆ ಇದೆ. ಬಳಿಕ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಅಶೋಕ್​ ಚವಾಣ್
ಅಶೋಕ್​ ಚವಾಣ್

ಮುಂಬೈ (ಮಹಾರಾಷ್ಟ್ರ): ಕಾಂಗ್ರೆಸ್​​ಗೆ ಗುಡ್​ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಮಂಗಳವಾರ ಬಿಜೆಪಿ ಸೇರುವ ಸಾಧ್ಯತೆ ಇದೆ. ಜೊತೆಗೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಗುಲ್ಲೆದ್ದಿದೆ.

ಅಶೋಕ್ ಚವಾಣ್ ಇಂದು ಮಧ್ಯಾಹ್ನ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ರಾಜ್ಯಾಧ್ಯಕ್ಷ ಚಂದ್ರಶೇಖರ್​ ಬಾವಂಕುಲೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಚವಾಣ್​​​​ ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ನಾಮನಿರ್ದೇಶನ: ಅಶೋಕ್ ಚವಾಣ್ ಅವರು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಸೋಮವಾರ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದಲೂ ವಿದಾಯ ಹೇಳಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಇನ್ನೂ, ಯಾವುದೇ ಪಕ್ಷ ಸೇರುವ ನಿರ್ಧಾರ ಮಾಡಿಲ್ಲ. ಇನ್ನೆರಡು ದಿನದಲ್ಲಿ ಮುಂದಿನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದಿದ್ದರು.

ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಅಶೋಕ್ ಚವಾಣ್​ರನ್ನು ಬಿಜೆಪಿಗೆ ಸೇರಿಸಿಕೊಂಡು, ರಾಜ್ಯದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂವರ ಪೈಕಿ ಒಬ್ಬರಾಗಿ ನಾಮನಿರ್ದೇಶನ ಮಾಡುವ ಬಗ್ಗೆಯೂ ಬಲವಾದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 15 ರಂದು ಸಂಭಾಜಿನಗರಕ್ಕೆ ಭೇಟಿ ನೀಡಲಿದ್ದಾರೆ. ಅಂದೇ ಚವಾಣ್​ ಅವರು ಬಿಜೆಪಿ ಸೇರುವ ಮನಸ್ಸು ಮಾಡಿದ್ದಾರೆ. ಮೇಲಾಗಿ ಕೇಂದ್ರದ ಹಿರಿಯ ನಾಯಕರ ಸಮ್ಮುಖದಲ್ಲೇ ಕಮಲ ಪಕ್ಷ ಸೇರುವ ಇಂಗಿತವನ್ನು ಮಾಜಿ ಸಿಎಂ ಹೊಂದಿದ್ದಾರೆ ಎಂದು ಹೇಳಲಾಗಿದೆ. ಆದರೆ, ಫೆಬ್ರವರಿ 13 ರಂದು ಮಧ್ಯಾಹ್ನ 12.30 ಕ್ಕೆ ಪಕ್ಷದ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಸಿಎಂ ದೇವೇಂದ್ರ ಫಡ್ನವೀಸ್​ ಮತ್ತು ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಂಕುಳೆ ಅವರ ನೇತೃತ್ವದಲ್ಲಿ ಕೇಸರಿ ಪಡೆ ಸೇರಲಿದ್ದಾರೆ ಎಂಬುದು ಸದ್ಯದ ಮಾಹಿತಿಯಾಗಿದೆ. ಇದಾದ ಬಳಿಕ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ಪತ್ರಿಕಾಗೋಷ್ಠಿಯಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರದಲ್ಲಿ ಮಂತ್ರಿಸ್ಥಾನ?: ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಅಶೋಕ್ ಚವಾಣ್ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಮರಾಠ ಸಮುದಾಯದ ಹಿರಿಯ ನಾಯಕ. ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಲಾಭವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಮೂಲಕ ಮೂರನೇ ಅವಧಿಯಲ್ಲಿ ಬಿಜೆಪಿ ಗೆದ್ದರೆ, ನರೇಂದ್ರ ಮೋದಿ ಸರ್ಕಾರದಲ್ಲಿ ಅಶೋಕ್ ಚವಾಣ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಇದೆ.

ಇದನ್ನೂ ಓದಿ: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.