ETV Bharat / bharat

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಐತಿಹಾಸಿಕ ಜಯದತ್ತ 'ಮಹಾಯುತಿ': ಮುಗ್ಗರಿಸಿದ 'ಮಹಾ ವಿಕಾಸ್ ಅಘಾಡಿ'

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಸದ್ಯದ ಅಂಕಿ ಅಂಶದ ಪ್ರಕಾರ ಮಹಾಯುತಿ ಮೈತ್ರಿಕೂಟವು 220 ಸ್ಥಾನಗಳಲ್ಲಿ ಮುನ್ನಡೆಗಳಿಸಿದ್ದು, ಮಹಾ ವಿಕಾಸ್ ಅಘಾಡಿ ಪಕ್ಷ 57 ಸ್ಥಾನಗಳನ್ನು ಪಡೆದು ಹಿಂದುಳಿದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (ANI)
author img

By PTI

Published : Nov 23, 2024, 11:16 AM IST

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಮ್ಯಾಜಿಕ್​ ನಂಬರ್ ದಾಟಿ ಆಡಳಿತಾಧಿಕಾರದ ಚುಕ್ಕಾಣಿ ಹಿಡಿಯಲು ಮುನ್ನುಗ್ಗುತ್ತಿದೆ.

ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ 220 ರಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಮಹಾ ವಿಕಾಸ್ ಅಘಾಡಿ ಪಕ್ಷದ ನಾಯಕರು ಕೇವಲ 57 ಸ್ಥಾನಗಳಲ್ಲಿ ಲೀಡ್​ ಪಡೆದಿದ್ದಾರೆ. ಇತರರು 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಉಪನಾಯಕರಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಸುತ್ತಿನ ಮತ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಮಾಹಿತಿ ಪ್ರಕಾರ, ಮೊದಲ ಸುತ್ತಿನ ಮತ ಎಣಿಕೆಯ ಕೊನೆಯಲ್ಲಿ ಕೊಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ಶಿಂಧೆ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಗಿಂತ 4,053 ಮತಗಳಿಂದ ಮುನ್ನಡೆ ಸಾಧಿಸಿದ್ದರು. ಫಡ್ನವಿಸ್ ಅವರು ನಾಗ್ಪುರ ನೈಋತ್ಯದಿಂದ 2,246 ಮತಗಳಿಂದ ಮತ್ತು ಬಾರಾಮತಿ ಕ್ಷೇತ್ರದಲ್ಲಿ ಪವಾರ್ 3,759 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ಅವರು ಮೊದಲ ಸುತ್ತಿನ ಅಂತ್ಯಕ್ಕೆ ಸಕೋಲಿ ಕ್ಷೇತ್ರದಲ್ಲಿ 344 ಮತಗಳಿಂದ ಮುನ್ನಡೆಯಲ್ಲಿದ್ದರು. ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆ (ಯುಬಿಟಿ) ನಾಯಕ ಮತ್ತು ಹಾಲಿ ಶಾಸಕ ಆದಿತ್ಯ ಠಾಕ್ರೆ 495 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಸಂಗಮ್ನೇರ್ ವಿಧಾನಸಭಾ ಕ್ಷೇತ್ರದಲ್ಲಿ 1,831 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಹಾಗೇ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ ಅವರು ಮೊದಲ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಕರಾದ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,590 ಮತಗಳಿಂದ ಹಿಂದುಳಿದಿದ್ದಾರೆ.

ಮಹಾಯುತಿ ಮೈತ್ರಿಕೂಟ: ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 149 ವಿಧಾನಸಭಾ ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಮಹಾ ವಿಕಾಸ್ ಅಘಾಡಿ ಪಕ್ಷ: ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಇದನ್ನೂ ಓದಿ: ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಾದ್ರಾ ಭಾರಿ ಮುನ್ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.