ಅಯೋಧ್ಯೆ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಅಯೋಧ್ಯಾ ನಗರಿ ಇಂದು ಸಂಜೆ ದೀಪಾವಳಿ ಬೆಳಕಿನಲ್ಲಿ ರಾರಾಜಿಸಿತು. ಕಣ್ಣು ಹಾಯಿಸಿದಲ್ಲೆಲ್ಲ ಹಬ್ಬದ ಸಡಗರ, ಸಂಭ್ರಮವೇ ಕಂಡುಬಂತು. ಸರಯೂ ನದಿ ತೀರದಲ್ಲಿ 8ನೇ ವರ್ಷದ ದೀಪಾವಳಿ ದೀಪೋತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯಿತು.
ಇದೇ ವೇಳೆ ಎರಡು ಗಿನ್ನೆಸ್ ವಿಶ್ವದಾಖಲೆಗಳು ನಿರ್ಮಾಣವಾದವು. ಒಂದೆಡೆ ಅತಿ ಹೆಚ್ಚು ಜನರು ಆರತಿ ಬೆಳಗಿದ ದಾಖಲೆಯಾದರೆ ಮತ್ತೊಂದೆಡೆ, ವಿಶ್ವದಲ್ಲೇ ಅತಿ ಹೆಚ್ಚು ಮಣ್ಣಿನ ಹಣತೆಗಳಲ್ಲಿ ಎಣ್ಣೆಯ ದೀಪಗಳನ್ನು ಹಚ್ಚಿದ ದಾಖಲೆ ರಚನೆಯಾಯಿತು.
25 ಲಕ್ಷ ಮಣ್ಣಿನ ಹಣತೆಗಳಲ್ಲಿ ಎಣ್ಣೆಯ ದೀಪಗಳನ್ನು ಏಕಕಾಲದಲ್ಲಿ ಬೆಳಗಿಸಲಾಯಿತು. ಇದೇ ವೇಳೆ, 1,121 ಮಂದಿ ವೇದಾಚಾರ್ಯರು ಸರಯೂ ನದಿಗೆ ಆರತಿ ಎತ್ತಿದರು. ಈ ದೃಶ್ಯ ಕಣ್ಣಿಗೆ ಹಬ್ಬದಂತೆ ರಮಣೀಯವಾಗಿ ಗೋಚರಿಸಿತು.
#WATCH | Uttar Pradesh: Lakhs of diyas illuminated along the banks of the Saryu River in Ayodhya as part of the grand #Deepotsav celebration here. #Diwali2024 pic.twitter.com/P29BPld9KO
— ANI (@ANI) October 30, 2024
ಅಯೋಧ್ಯೆ ಶ್ರೀರಾಮನ ಪವಿತ್ರ ಜನ್ಮಸ್ಥಳ. ಸರಯೂ ನದಿ ಈ ಪಟ್ಟಣದ ಮೂಲಕ ಹಾದು ಹೋಗುತ್ತದೆ. 2027ರಿಂದ ದೀಪಾವಳಿ ಮುನ್ನಾ ದಿನ ಇಲ್ಲಿ ವೈಭವದಿಂದ ದೀಪೋತ್ಸವವನ್ನು ಆಯೋಜಿಸಿಕೊಂಡು ಬರಲಾಗುತ್ತದೆ. ಲಕ್ಷಾಂತರ ಮಣ್ಣಿನ ಹಣತೆಗಳನ್ನು ಏಕಕಾಲದಲ್ಲಿ ಬೆಳಗಿಸಲಾಗುತ್ತದೆ. ನಂತರ ಆಕರ್ಷಕ ಲೇಸರ್ ಶೋ, ಪಟಾಕಿ ಪ್ರದರ್ಶನ ನಡೆಯುತ್ತದೆ.
#WATCH | Firecrackers being burst in Uttar Pradesh's Ayodhya as part of #Deepotsav celebration#Diwali2024 pic.twitter.com/XXnXWfWWNR
— ANI (@ANI) October 30, 2024
ಇದನ್ನೂ ಓದಿ: ಇಂದು ಶ್ವೇತಭವನದಲ್ಲಿ ಭಾರತೀಯ ಅಮೆರಿಕನ್ನರೊಂದಿಗೆ ಬೈಡನ್ ದೀಪಾವಳಿ ಸಂಭ್ರಮ