ETV Bharat / bharat

ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಬಾಬಾ ಸಿದ್ದಿಕಿ ಅಂತ್ಯಕ್ರಿಯೆ: ಮಹಾರಾಷ್ಟ್ರ ಸಿಎಂ ಶಿಂದೆ ಘೋಷಣೆ - BABA SIDDIQUE SHOT DEAD

ಮುಂಬೈನಲ್ಲಿ ಹತ್ಯೆಗೀಡಾದ ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ
ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ (ANI)
author img

By ANI

Published : Oct 13, 2024, 12:33 PM IST

ಮುಂಬೈ: ಮುಂಬೈನಲ್ಲಿ ಹತ್ಯೆಗೀಡಾದ ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ಘೋಷಿಸಿದ್ದಾರೆ. 2004-2008ರ ಅವಧಿಯಲ್ಲಿ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಮತ್ತು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಎಂಎಚ್ಎಡಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಿದ್ದಿಕಿ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ.

ಏತನ್ಮಧ್ಯೆ, ಸಿದ್ದಿಕಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗವು ಭಾರತೀಯ ನ್ಯಾಯ ಸಂಹಿತಾ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ನೋಂದಣಿ ಸಂಖ್ಯೆ 589/2024, ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103 (1), 109, 125 ಮತ್ತು 3 (5), ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3, 25, 5 ಮತ್ತು 27 ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 37 ಮತ್ತು ಸೆಕ್ಷನ್ 137 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಪೊಲೀಸರ ತಂಡ ಮುಂಬೈಗೆ: ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣದ ತನಿಖೆಗಾಗಿ ದೆಹಲಿ ಪೊಲೀಸರು ವಿಶೇಷ ತನಿಖಾ ತಂಡವನ್ನು ಮುಂಬೈಗೆ ಕಳುಹಿಸಲಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್ ಮೂಲಗಳು ತಿಳಿಸಿವೆ. ಮುಂಬೈನಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಗ್ಯಾಂಗಸ್ಟರ್​ಗಳು ಈ ಕೃತ್ಯ ಎಸಗಿರಬಹುದು ಎಂದು ಮೂಲಗಳು ಹೇಳಿವೆ.

ಆರೋಪಿಗಳ ಹೆಸರು ಬಹಿರಂಗ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ಅಜಿತ್ ಪವಾರ್ ಬಣದ ನಾಯಕ ಸಿದ್ದಿಕಿ ಅವರ ಮೇಲೆ ಬಾಂದ್ರಾದ ನಿರ್ಮಲ್ ನಗರದ ಬಳಿ ಗುಂಡಿಕ್ಕಲಾಗಿತ್ತು. ನಂತರ ಅವರು ಶನಿವಾರ ತಡರಾತ್ರಿ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.

ಸಿದ್ದಿಕ್ಕಿ ಮೇಲೆ ಕಣ್ಣಿಟ್ಟಿದ್ದ ಆರೋಪಿಗಳು: ಪೊಲೀಸರ ಪ್ರಕಾರ, ಆರೋಪಿಗಳು ಕೆಲವು ಸಮಯದಿಂದ ಮುಂಬೈನಲ್ಲಿಯೇ ಇದ್ದು, ಸಿದ್ದಿಕಿಯ ಮೇಲೆ ಕಣ್ಣಿಟ್ಟಿದ್ದರು. ಮೂರನೇ ಆರೋಪಿಗಾಗಿ ಶೋಧ ನಡೆಯುತ್ತಿದ್ದು, ಮುಂಬೈ ಅಪರಾಧ ವಿಭಾಗದ ಹಲವಾರು ತಂಡಗಳು ಈ ಪ್ರಕರಣದ ತನಿಖೆ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಬಾ ಸಿದ್ದಿಕಿ ಕುರಿತು..: ಬಾಂದ್ರಾ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ಅಜಿತ್ ಪವಾರ್ ಅವರ ಎನ್​ಸಿಪಿಗೆ ಸೇರಿದ್ದರು. ಶನಿವಾರ ಸಂಜೆ ಅಪರಿಚಿತ ದಾಳಿಕೋರರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.