ETV Bharat / bharat

'ಪಟಾಕಿ ನಿಷೇಧಿಸಿ'; ಯುಪಿ, ಹರಿಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ - BAN CRACKERS

ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಎಂದು ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

'ಪಟಾಕಿ ನಿಷೇಧಿಸಿ'; ಯುಪಿ, ಹರಿಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಸಾಂದರ್ಭಿಕ ಚಿತ್ರ (IANS)
author img

By ETV Bharat Karnataka Team

Published : 2 hours ago

ನವದೆಹಲಿ: ರಾಷ್ಟ್ರ ರಾಜಧಾನಿಯ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಉತ್ತರ ಪ್ರದೇಶ ಮತ್ತು ಹರಿಯಾಣ ಸರಕಾರಗಳಿಗೆ ಸೂಚಿಸಿದೆ. ದೆಹಲಿ ಮತ್ತು ರಾಜಸ್ಥಾನ ಸರ್ಕಾರಗಳು ಈಗಾಗಲೇ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಿದ್ದರೂ, ಉಳಿದ ರಾಜ್ಯಗಳು ಇದೇ ರೀತಿಯ ಕ್ರಮ ಕೈಗೊಂಡರೆ ಮಾತ್ರ ಈ ನಿಷೇಧ ಪರಿಣಾಮಕಾರಿಯಾಗಲಿದೆ ಎಂದು ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ನ್ಯಾಯಪೀಠ ಹೇಳಿತು.

ದೆಹಲಿ ಮತ್ತು ಎನ್​ಸಿಆರ್ ಪ್ರದೇಶದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಎ.ಜಿ.ಮಾಸಿಹ್ ಅವರನ್ನೂ ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿತು. ಹರಿಯಾಣದಲ್ಲಿ ಹಸಿರು ಪಟಾಕಿಗಳ ಬಳಕೆಗೆ ಅನುಮತಿ ನೀಡಲಾಗಿದ್ದರೆ, ರಾಜಸ್ಥಾನವು ಎನ್​ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಿದೆ ಎಂದು ಸುಪ್ರೀಂ ಕೋರ್ಟ್​ಗೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಲಾಯಿತು.

ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ ನಿಯಮಗಳನ್ನೇ ಅನುಸರಿಸಿ ಉತ್ತರ ಪ್ರದೇಶ ಮತ್ತು ಹರಿಯಾಣಗಳಲ್ಲೂ ಪಟಾಕಿ ನಿಷೇಧಿಸಬೇಕೆಂದು ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜನವರಿ 15, 2025 ಕ್ಕೆ ಮುಂದೂಡಿತು. ಅಲ್ಲದೆ, ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (ಜಿಆರ್​ಎಪಿ) -4 ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತಂಡಗಳನ್ನು ರಚಿಸುವಂತೆ ನ್ಯಾಯಾಲಯವು ದೆಹಲಿ ಮತ್ತು ಎನ್​​ಸಿಆರ್ ರಾಜ್ಯಗಳಿಗೆ ನಿರ್ದೇಶನ ನೀಡಿತು.

ಈ ಹಿಂದಿನ ವಿಚಾರಣೆಯಲ್ಲಿ ಪಟಾಕಿಗಳ ಬಳಕೆಯನ್ನು ಶಾಶ್ವತವಾಗಿ ನಿಷೇಧಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ದೆಹಲಿ ಮತ್ತು ಪಕ್ಕದ ರಾಜ್ಯಗಳ ಸರ್ಕಾರಗಳಿಗೆ ಸೂಚಿಸಿತ್ತು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಹೇಳಿತ್ತು.

"ಪಟಾಕಿಗಳ ನಿಷೇಧದಿಂದ ವಾಯುಮಾಲಿನ್ಯ ಮಾತ್ರವಲ್ಲದೆ ಶಬ್ದ ಮಾಲಿನ್ಯವನ್ನು ಸಹ ನಿಯಂತ್ರಿಸಬಹುದು. ಪಟಾಕಿಗಳ ಬಳಕೆಯನ್ನು ನಿಷೇಧಿಸುವ ವಿಷಯದ ಬಗ್ಗೆ ರಾಜ್ಯ ಸರ್ಕಾರಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವ ಬಗ್ಗೆ ನಾವು ಪರಿಶೀಲನೆ ಮಾಡಲಿದ್ದೇವೆ" ಎಂದು ಅದು ಹೇಳಿದೆ.

ಇದಕ್ಕೂ ಮುನ್ನ ನವೆಂಬರ್​ನಲ್ಲಿ ದೀಪಾವಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೆ ತರಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು ಮತ್ತು ಪಟಾಕಿ ನಿಷೇಧ ಜಾರಿಗೆ ತರದಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ನಿಷೇಧ ಜಾರಿಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ದೆಹಲಿ ಸರ್ಕಾರ ಮತ್ತು ಪೊಲೀಸ್ ಆಯುಕ್ತರಿಗೆ ಸೂಚಿಸಿತ್ತು.

ಇದನ್ನೂ ಓದಿ : ಉತ್ಸವದಲ್ಲಿ ಆನೆಗಳ ಬಳಕೆಗೆ ಹೈಕೋರ್ಟ್ ವಿಧಿಸಿದ್ದ ನಿರ್ಬಂಧಗಳಿಗೆ ಸುಪ್ರೀಂ ಕೋರ್ಟ್ ತಡೆ - ELEPHANTS IN TEMPLE FESTIVALS

ETV Bharat Logo

Copyright © 2024 Ushodaya Enterprises Pvt. Ltd., All Rights Reserved.