ETV Bharat / bharat

ಸರ್ವಪಕ್ಷ ಸಭೆಯಲ್ಲಿ ಖರ್ಗೆ, ರಾಹುಲ್ ಗಾಂಧಿ ಭಾಗಿ: ಬಾಂಗ್ಲಾದೇಶದಲ್ಲಿನ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ - All party meeting - ALL PARTY MEETING

ಬಾಂಗ್ಲಾದೇಶದ ಅಶಾಂತಿ ಕುರಿತ ಸರ್ವಪಕ್ಷ ಸಭೆಯಲ್ಲಿ ಖರ್ಗೆ, ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗುತ್ತಿದೆ.

Bangladesh unrest  All party meeting  Rahul Gandhi
ಬಾಂಗ್ಲಾದೇಶದ ಅಶಾಂತಿ ಕುರಿತ ಸರ್ವಪಕ್ಷ ಸಭೆಯಲ್ಲಿ ಖರ್ಗೆ, ರಾಹುಲ್ ಗಾಂಧಿ ಭಾಗಿ (ANI)
author img

By ANI

Published : Aug 6, 2024, 1:29 PM IST

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರ ಮಂಗಳವಾರ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (ರಾಜ್ಯಸಭೆ) ಮತ್ತು ರಾಹುಲ್ ಗಾಂಧಿ (ಲೋಕಸಭೆ) ಭಾಗವಹಿಸಿದರು.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಪ್ರತಿಭಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿ-130 ಹರ್ಕ್ಯುಲಸ್ ಸೇನಾ ವಿಮಾನದಲ್ಲಿ ನವದೆಹಲಿ ಬಳಿಯ ಹಿಂಡನ್ ಏರ್ ಬೇಸ್‌ಗೆ ಬಂದಿಳಿದಿದ್ದಾರೆ. ಇಂದಿನ ಸಭೆಯಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಢಾಕಾ ಟ್ರಿಬ್ಯೂನ್‌ನ ಪ್ರಕಾರ, ಸೋಮವಾರ ಬಾಂಗ್ಲಾದೇಶದಲ್ಲಿ ಪೊಲೀಸ್ ಗುಂಡಿನ ದಾಳಿ, ಗುಂಪು ಥಳಿತ ಮತ್ತು ಬೆಂಕಿ ಹಚ್ಚುವಿಕೆಯೊಂದಿಗೆ ಅಶಾಂತಿಯ ಪರಿಸ್ಥಿತಿಯಲ್ಲಿ ಕನಿಷ್ಠ 135 ಜನರು ಮೃತಪಟ್ಟಿದ್ದಾರೆ. ಢಾಕಾ ಮೆಡಿಕಲ್ ಕಾಲೇಜು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ದ ಡೈಲಿ ಪ್ರೋಥೋಮ್ ಅಲೋ ಪತ್ರಿಕೆ, ಗುಂಡೇಟಿನ ಗಾಯಗೊಂಡವರು ಸೇರಿ ಒಟ್ಟು 500 ಗಾಯಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ. 70 ಮಂದಿಗೆ ಗಂಭೀರ ಗಾಯಗಾಳಾಗಿವೆ ಎಂದು ವರದಿ ಮಾಡಿದೆ.

ಶೇಖ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ್ದಾರೆ ಎಂಬ ವರದಿಗಳು ಹೊರಬಂದ ನಂತರ, ಜನರು ಬೀದಿಗಿಳಿದು ಸಂಭ್ರಮಿಸಿದರು ಎಂದು ಢಾಕಾ ಟ್ರಿಬ್ಯೂನ್ ವರದಿ ಪ್ರಕಟಿಸಿದೆ.

ಬಾಂಗ್ಲಾದೇಶದ ವಿದ್ಯಾರ್ಥಿಗಳ ಪ್ರತಿಭಟನೆಯು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸುವಂತೆ ಒತ್ತಾಯಿದೆ. ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ವಿರುದ್ಧ ದಂಗೆಯು ದೊಡ್ಡದಾಗಿ ಬೆಳೆದಿದೆ. ಢಾಕಾದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 14 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 95 ಜನರು ಸಾವನ್ನಪ್ಪಿದ್ದರು. ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ದ ಡೈಲಿ ಪ್ರೋಥೋಮ್ ಅಲೋ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: ಹೆಚ್.​ಡಿ.ದೇವೇಗೌಡ - H D Devegowda

ETV Bharat Logo

Copyright © 2024 Ushodaya Enterprises Pvt. Ltd., All Rights Reserved.