ETV Bharat / bharat

ಪಶ್ಚಿಮ ಬಂಗಾಳ ಡಿಜಿಪಿ ರಾಜೀವ್​ ವಜಾ: 6 ರಾಜ್ಯಗಳ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿದ ಚುನಾವಣಾ ಆಯೋಗ

ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿಟ್ಟ ಹೆಜ್ಜೆ ಇಟ್ಟಿದೆ. 6 ರಾಜ್ಯಗಳಲ್ಲಿ ಅಧಿಕಾರಿಗಳ ವರ್ಗಕ್ಕೆ ಸೂಚಿಸಿದೆ.

ಚುನಾವಣಾ ಆಯೋಗ
ಚುನಾವಣಾ ಆಯೋಗ
author img

By PTI

Published : Mar 18, 2024, 3:46 PM IST

ನವದೆಹಲಿ: ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೆಲ ಅಧಿಕಾರಿಗಳನ್ನು ವಜಾ ಮಾಡಲು ಆದೇಶಿಸಿದೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ರಾಜಿ ಮಾಡಿಕೊಂಡ ಆರೋಪದ ಮೇಲೆ ಅಲ್ಲಿನ ಪೊಲೀಸ್​ ಮಹಾನಿರ್ದೇಶಕ (ಡಿಜಿಪಿ) ರಾಜೀವ್​ ಕುಮಾರ್​ ಅವರನ್ನು ಸೋಮವಾರ ವಜಾಗೊಳಿಸಲಾಗಿದೆ.

ಇದಲ್ಲದೇ, ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ 6 ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಗಳನ್ನೂ ಚುನಾವಣಾ ಕೆಲಸಗಳಿಂದ ದೂರವಿಡಲು ಆಯೋಗ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಇಂದು (ಸೋಮವಾರ) ಸಂಜೆಯೊಳಗೆ ಕ್ರಮ ಕೈಗೊಂಡು ವರದಿ ನೀಡುವಂತೆಯೂ ತಾಕೀತು ಮಾಡಿದೆ.

ಮಹಾರಾಷ್ಟ್ರದಲ್ಲಿ ಕಮಿಷನರ್​ಗಳ ಎತ್ತಂಗಡಿ: ಒಂದೇ ಸ್ಥಳದಲ್ಲಿ ಮೂರು ವರ್ಷ ಅಧಿಕಾರ ಪೂರೈಸಿರುವ ಅಥವಾ ಆ ಅಧಿಕಾರಿಗಳು ತವರು ಜಿಲ್ಲೆಯವರೇ ಆದಲ್ಲಿ, ಅಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆಯೂ ಆಯೋಗ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಮಹಾರಾಷ್ಟ್ರದ ಕೆಲವು ಮುನ್ಸಿಪಲ್ ಕಮಿಷನರ್‌ಗಳು ಮತ್ತು ಕೆಲವು ಹೆಚ್ಚುವರಿ/ ಉಪ ಮುನ್ಸಿಪಲ್ ಕಮಿಷನರ್‌ಗಳನ್ನು ಎತ್ತಂಗಡಿ ಮಾಡುವಂತೆಯೂ ಸೂಚಿಸಲಾಗಿದೆ.

ಈ ಹಿಂದಿನ ಆದೇಶವನ್ನು ಪಾಲಿಸದ ಕಾರಣ ಅಸಮಾಧಾನ ವ್ಯಕ್ತಪಡಿಸಿರುವ ಆಯೋಗ, ಇಂದು ಸಂಜೆ 6 ಗಂಟೆಯೊಳಗೆ ವರ್ಗಾವಣೆ ಮಾಡಿದ ವರದಿಯನ್ನು ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಮಮತಾ ದೀದಿಗೆ ಶಾಕ್​: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಡಿಜಿಪಿ ರಾಜೀವ್​ ಕುಮಾರ್​ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಲಾಗಿದೆ. 2016, 2019 ರ ಚುನಾವಣೆಯಲ್ಲೂ ಆಯೋಗ ಇದೇ ರೀತಿಯ ಕ್ರಮ ಕೈಗೊಂಡಿತ್ತು. ಇಂಡಿಯಾ ಕೂಟದಿಂದ ದೂರವಾಗಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಬಯಸಿರುವ ಸಿಎಂ ಮಮತಾಗೆ ಇದು ಶಾಕ್​ ನೀಡಿದೆ.

ಇನ್ನೂ, 6 ರಾಜ್ಯಗಳಲ್ಲಿ ವಜಾ ಮಾಡಲು ಸೂಚಿಸಿರುವ ಅಧಿಕಾರಿಗಳು ಆಯಾ ರಾಜ್ಯಗಳ ಮುಖ್ಯಮಂತ್ರಿ ಕಚೇರಿಯ ಜೊತೆಗೆ ನೇರ ಸಂಪರ್ಕವನ್ನು ಹೊಂದಿರುವ ಆರೋಪಗಳು ಕಂಡುಬಂದಿವೆ. ಸಂಭಾವ್ಯ ರಾಜಿ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದೆ.

ಲೋಕಸಭೆ ಚುನಾವಣೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್​​​​ 19ಕ್ಕೆ ನಡೆಯಲಿದೆ. ಜೂನ್​ 4ಕ್ಕೆ ಮತ ಎಣಿಕೆ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ : ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮುಖ್ಯ ಚುನಾವಣಾಧಿಕಾರಿ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.