ETV Bharat / bharat

"10 ವರ್ಷ ಜೈಲು, ₹1 ಕೋಟಿ ದಂಡ": ಪ್ರಶ್ನೆಪತ್ರಿಕೆ ಸೋರಿಕೆಗೆ ಬಿಹಾರ ಸರ್ಕಾರದಿಂದ ಕಠಿಣ ಮಸೂದೆ ಅಂಗೀಕಾರ - Anti Paper Leak Bill - ANTI PAPER LEAK BILL

ನೀಟ್​ ಪರೀಕ್ಷಾ ಅಕ್ರಮ ಬೆನ್ನಲ್ಲೇ, ಬಿಹಾರ ಸರ್ಕಾರ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ನಿಯಮಗಳ ಮಸೂದೆಯನ್ನು ಅಂಗೀಕರಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಬಿಹಾರ ಸರ್ಕಾರದಿಂದ ಕಠಿಣ ಮಸೂದೆ ಅಂಗೀಕಾರ
ಪ್ರಶ್ನೆಪತ್ರಿಕೆ ಸೋರಿಕೆಗೆ ಬಿಹಾರ ಸರ್ಕಾರದಿಂದ ಕಠಿಣ ಮಸೂದೆ ಅಂಗೀಕಾರ (ETV Bharat)
author img

By ANI

Published : Jul 24, 2024, 6:11 PM IST

ಪಾಟ್ನಾ (ಬಿಹಾರ): ನೀಟ್​-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಬಿಹಾರದ ಕೆಲವೆಡೆ ಸೋರಿಕೆಯಾಗಿ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ಟೀಕೆಯ ಬೆನ್ನಲ್ಲೇ, ಅಲ್ಲಿನ ಸರ್ಕಾರ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮಸೂದೆಯನ್ನು ಅಂಗೀಕರಿಸಿದೆ. ಬುಧವಾರ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಧ್ವನಿಮತದ ಮೂಲಕ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಇದನ್ನು ವಿಪಕ್ಷಗಳು ವಿರೋಧಿಸಿ ಸಭಾತ್ಯಾಗ ಮಾಡಿವೆ.

ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಮಸೂದೆ-2024 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದರು. ಆದರೆ, ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಇದರ ನಡುವೆಯೂ ಸಿಎಂ ನಿತೀಶ್​​ ಕುಮಾರ್​ ನೇತೃತ್ವದ ಸರ್ಕಾರ ಮಸೂದೆಯನ್ನು ಧ್ವನಿಮತಕ್ಕೆ ಹಾಕಿ ಅಂಗೀಕಾರ ಪಡೆದುಕೊಂಡಿತು.

ಮಸೂದೆಯಲ್ಲೇನಿದೆ?: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತೊಡಗಿಕೊಂಡ ಆರೋಪಿಗಳಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂಪಾಯಿ ದಂಡವನ್ನು ವಿಧಿಸಲು ಮಸೂದೆಯಲ್ಲಿ ಅವಕಾಶ ನೀಡಿದೆ. ಕಠಿಣ ನಿಯಮಗಳಿಂದ ರಾಜ್ಯದಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸೋರಿಕೆಯಾಗದಂತೆ ತಡೆಯುವುದು ಇದರ ಉದ್ದೇಶವಾಗಿದೆ.

ಬಳಿಕ ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಚಿವ ಚೌಧರಿ, "ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವ ಅಗತ್ಯವಿದೆ ಎಂಬುದನ್ನ ಸದನಕ್ಕೆ ತಿಳಿಸಲಾಗಿತ್ತು. ಇದೀಗ ನೀಟ್ ಕೇಸ್​ ತನಿಖೆಯ ಹಂತದಲ್ಲಿದೆ. ಪಬ್ಲಿಕ್​ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸುವ ಅವಶ್ಯಕತೆಯಿದೆ. ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮವಾಗಲು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ ಎಂದರು.

ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂಪಾಯಿ ದಂಡ ವಿಧಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಕಠಿಣ ನಿಯಮವು ಶ್ರಮಜೀವಿಗಳ ಭವಿಷ್ಯಕ್ಕೆ ನೆರವಾಗಲಿದೆ. ಬಿಹಾರದ ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮಗಳಿಂದ ಸುರಕ್ಷಿತವಾಗಿರುತ್ತಾರೆ ಎಂದರು.

ನೀಟ್​ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್​ಟಿಎ) ನಡೆಸಿದ್ದ ನೀಟ್​ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬಿಹಾರದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಎರಡು ಪ್ರದೇಶಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಈಗಾಗಲೇ ಹಲವರನ್ನು ಬಂಧಿಸಲಾಗಿದೆ.

ಅಕ್ರಮವನ್ನು ಖಂಡಿಸಿ, ನೀಟ್​ ಪರೀಕ್ಷೆಯನ್ನು ರದ್ದು ಮಾಡಿ ಮತ್ತೆ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕೋರಿ ಆಕಾಂಕ್ಷಿಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ, ಪರೀಕ್ಷಾ ಅಕ್ರಮವು ವ್ಯವಸ್ಥಿತವಾಗಿ ನಡೆದಿಲ್ಲ. ಹಣಕ್ಕಾಗಿ ಕೆಲ ಪ್ರದೇಶಗಳಲ್ಲಿ ನಡೆದಿದೆ. ಹೀಗಾಗಿ ಪರೀಕ್ಷೆಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಆದೇಶಿಸಿತ್ತು. ಬಳಿಕ ಫಲಿತಾಂಶವನ್ನು ಎರಡನೇ ಬಾರಿಗೆ ಪ್ರಕಟಿಸಲು ಸೂಚಿಸಿತ್ತು. ಎನ್​ಟಿಎ ಕೇಂದ್ರವಾರು ಮತ್ತು ನಗರವಾರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ.

ಇದನ್ನೂ ಓದಿ: ನೀಟ್​ ಪ್ರಶ್ನೆಪತ್ರಿಕೆ ಅಕ್ರಮ ವ್ಯವಸ್ಥಿತ ಪಿತೂರಿಯಲ್ಲ, ಪರೀಕ್ಷೆ ರದ್ದು ಪಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​ - Supreme Court on NEET exam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.