ETV Bharat / bharat

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಬಿಜೆಪಿ ಜೊತೆ ಹೊಸ ಸರ್ಕಾರ, ಸಂಜೆ ಪ್ರಮಾಣ - ರಾಜೀನಾಮೆ ಕೊಟ್ಟ ನಿತೀಶ್​

Bihar Political crisis: ಬಿಹಾರ ರಾಜಕೀಯದಲ್ಲಿ ಹೈಡ್ರಾಮಾ ನಡೆಯುತ್ತಿದೆ. ನಿತೀಶ್ ಕುಮಾರ್ ಎನ್​ಡಿಎ ಜೊತೆ ಸೇರಿ ಹೊಸ ಸರ್ಕಾರ ರಚಿಸಲು ಅಣಿಯಾಗುತ್ತಿದ್ದಾರೆ.

Nitish Kumar resigns  NDA  JDU  Nitish Kumar Resigns as CM  Take Oath Again  ಬಿಹಾರ್​ ರಾಜಕೀಯದಲ್ಲಿ ಹೈಡ್ರಾಮಾ  ರಾಜೀನಾಮೆ ಕೊಟ್ಟ ನಿತೀಶ್​ ಸಿಎಂ ಸ್ಥಾನಕ್ಕೆ ರಾಜೀನಾಮೆ
ಬಿಹಾರ್​ ರಾಜಕೀಯದಲ್ಲಿ ಹೈಡ್ರಾಮಾ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಿತೀಶ್​
author img

By ETV Bharat Karnataka Team

Published : Jan 28, 2024, 11:30 AM IST

ಪಾಟ್ನಾ(ಬಿಹಾರ): ಬಿಹಾರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಿಪ್ರಗತಿಯಲ್ಲಿ ನಡೆಯುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಣ ಎನ್‌ಡಿಎ ಜೊತೆ ಮತ್ತೆ ಕೈಜೋಡಿಸುತ್ತಿದೆ. ಇಂದು ಬೆಳಿಗ್ಗೆ ರಾಜಭವನಕ್ಕೆ ತೆರಳಿರುವ ನಿತೀಶ್​ ಕುಮಾರ್​ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಬಿಜೆಪಿ ಮತ್ತು ಜೆಡಿಯು ಶಾಸಕರ ಬೆಂಬಲದೊಂದಿಗೆ ಅವರು ಬಿಹಾರದಲ್ಲಿ ಮತ್ತೆ ಹೊಸ​ ಸರ್ಕಾರ ರಚಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಇಂದು ಸಂಜೆ ನಿತೀಶ್ ಪ್ರಮಾಣ ವಚನ: ಜೆಡಿಯು ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಇಂದು ಸಂಜೆ 4 ಗಂಟೆಯ ಸುಮಾರಿಗೆ ಬಿಜೆಪಿ ಬೆಂಬಲದೊಂದಿಗೆ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವರು. ಈ ಮೂಲಕ ಒಂಬತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ಕೈಗೊಳ್ಳಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಎಲ್‌ಜೆಪಿಆರ್ ಅಧ್ಯಕ್ಷ ಚಿರಾಗ್ ಪಾಸ್ವಾನ್ ಮತ್ತು ಇತರ ಮಿತ್ರಪಕ್ಷಗಳ ಅಧ್ಯಕ್ಷರುಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಮ್ಯಾಜಿಕ್‌ ನಂಬರ್‌ 127: ಜೆಡಿಯು 45, ಬಿಜೆಪಿಯ 78, ಹಿಂದೂಸ್ತಾನಿ ಅವಾಮ್ ಮೋರ್ಚಾದ 4 ಮತ್ತು ಒಬ್ಬ ಪಕ್ಷೇತರ ಶಾಸಕ ಸೇರಿದಂತೆ ಒಟ್ಟು 128 ಶಾಸಕರ ಬೆಂಬಲ ಪತ್ರವನ್ನು ನಿತೀಶ್ ಕುಮಾರ್ ರಾಜ್ಯಪಾಲರಿಗೆ ಹಸ್ತಾಂತರಿಸಲಿದ್ದಾರೆ.

ಬಿಜೆಪಿ-ಜೆಡಿಯು ಸಭೆ: ಮತ್ತೊಂದೆಡೆ, ನಿತೀಶ್ ಕುಮಾರ್ ನಿವಾಸದಲ್ಲಿ ಜೆಡಿಯು ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ಕೂಡ ಪಾಟ್ನಾದ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದರು.

ಇಂಡಿಯಾ ಮೈತ್ರಿಗೆ ಮತ್ತೆ ಆಘಾತ: ಮಹಾಘಟಬಂಧನ್‌ನಿಂದ (ಆರ್‌ಜೆಡಿ ಮತ್ತು ಕಾಂಗ್ರೆಸ್ ಒಳಗೊಂಡಿರುವ) ನಿತೀಶ್ ನಿರ್ಗಮನದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಗೆ ಭಾರಿ ಹಿನ್ನಡೆಯಾಗಲಿದೆ.

ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು ಇಸ್ರೇಲ್‌ನಲ್ಲಿ ಉದ್ಯೋಗ ಹುಡುಕುವ ಭಾರತೀಯರು: ಕೇಂದ್ರದ ವಿರುದ್ಧ ಖರ್ಗೆ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.