ದೆಹಲಿ/ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐಗೆ) ವಹಿಸುವಂತೆ ಆಗ್ರಹಿಸಿ ಸಂಸತ್ ಭವನದ ಆವರಣದಲ್ಲಿ ಇಂದು ಬಿಜೆಪಿ-ಜೆಡಿಎಸ್ ಸಂಸದರು ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದರು.
#WATCH | Delhi | Karnataka BJP MPs protest over MUDA alleged scam in the Parliament pic.twitter.com/kHFrl82ooM
— ANI (@ANI) July 26, 2024
ಕರ್ನಾಟಕದ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದೆ. ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೇ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿ ರಾಜ್ಯದಿಂದ ಆಯ್ಕೆಗೊಂಡ ಬಿಜೆಪಿ-ಜೆಡಿಎಸ್ ಸಂಸದರು ದೆಹಲಿಯಲ್ಲಿ ಪ್ರತಿಭಟಿಸಿದರು. ಸಂಸತ್ ಭವನದ ಆವರಣದಲ್ಲಿ ಭಿತ್ತಿಪತ್ರಗಳ ಪ್ರದರ್ಶಿಸಿ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದರು.
''ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ'' ಎಂಬರ್ಥವುಳ್ಳ ಹಿಂದಿ ಘೋಷಣೆಗಳನ್ನು ಕೂಗಿದರು. ''ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ'' ಎಂಬ ಘೋಷಣೆ ಕೂಗಿದರು. ''ರಿಟರ್ನ್ ದಿ ಲೂಟೆಡ್ ಮನಿ ಬಿಲಾಂಗಿಂಗ್ ಟು ಎಸ್‍ಟಿ ಕಮ್ಯುನಿಟಿ'', ಮುಡಾ ಹಗರಣದಲ್ಲಿ ಕೋಟಿ ಕೋಟಿ ನುಂಗಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂಬಂತಹ ಪ್ಲಕಾರ್ಡ್ ಹಿಡಿದು ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
#WATCH | Delhi: On Karnataka BJP MPs holding protest over alleged Muda Scam in Parliament premises, BJP MP Jagdish Shettar says, " the chief minister of karnataka is directly involved in the muda and valmiki commission issue...bjp is insisting on a cbi enquiry but he… pic.twitter.com/esors24cGo
— ANI (@ANI) July 26, 2024
ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪಿ.ಸಿ.ಮೋಹನ್ ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಎಂದರು.
ಇದನ್ನೂ ಓದಿ: ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಸಿಗದ ಅವಕಾಶ; ರಾಜಭವನದ ಕದ ತಟ್ಟಿದ ಬಿಜೆಪಿ - ಜೆಡಿಎಸ್ - RAJ BHAVAN CHALO