ಮುಂಬೈ, ಮಹಾರಾಷ್ಟ್ರ: ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಬಿಜೆಪಿಯ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲು ಸಭೆ ನಡೆಸಲಾಗುವುದು ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಭಾನುವಾರ ಹೇಳಿದ್ದಾರೆ. ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಲಾಗುತ್ತದೆ. ಈ ಸಭೆಗೆ ಕೇಂದ್ರದಿಂದ ಪ್ರತಿನಿಧಿಗಳು ಸಭೆಗೆ ಶಾಸಕಾಂಗ ಪಕ್ಷದ ನಾಯಕನ ಹೆಸರುಗಳೊಂದಿಗೆ ಆಗಮಿಸಲಿದ್ದಾರೆ. ಕೇಂದ್ರದಿಂದ ಬಂದಿರುವ ಹೆಸರುಗಳನ್ನು ಶಾಸಕಾಂಗ ಸಭೆಯ ಮುಂದಿಟ್ಟು ಅನುಮೋದನೆ ಪಡೆದು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜ್ವರದಿಂದ ಚೇತರಿಸಿಕೊಂಡ ಹಂಗಾಮಿ ಸಿಎಂ ಶಿಂಧೆ: ಮಹಾರಾಷ್ಟ್ರದ ಹಂಗಾಮಿ ಸಿಎಂ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಜ್ವರದಿಂದ ಚೇತರಿಸಿಕೊಂಡಿದ್ದು ಈಗ ಅವರು ಆರೋಗ್ಯವಾಗಿದ್ದಾರೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಟಲು ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಶಿಂಧೆ, ವಿಶ್ರಾಂತಿಗಾಗಿ ಸತಾರಾ ಜಿಲ್ಲೆಯಲ್ಲಿರುವ ತಮ್ಮ ಸ್ವ ಗ್ರಾಮಕ್ಕೆ ತೆರಳಿದ್ದರು.
ಬಿಡುವಿಲ್ಲದ ಚುನಾವಣೆ ವೇಳಾಪಟ್ಟಿ ಕೆಲಸದ ಬಳಿಕ ವಿಶ್ರಾಂತಿಗಾಗಿ ಸ್ವಗ್ರಾಮಕ್ಕೆ ಬಂದಿದ್ದೇನೆ. ನಾನು ಮುಖ್ಯಮಂತ್ರಿಯಾಗಿ 2.5 ವರ್ಷಗಳ ಕಾಲ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದೇನೆ. ಜನರು ನನ್ನನ್ನು ಭೇಟಿಯಾಗಲು ಬರುತ್ತಿದ್ದಾರೆ. ಈ ಸರ್ಕಾರ ಜನರ ಮಾತು ಕೇಳುತ್ತದೆ ಎಂದು ಹಂಗಾಮಿ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಶಿಂಧೆ ಕಳೆದ ಎರಡು ದಿನಗಳಿಂದ ಜ್ವರ ಮತ್ತು ಗಂಟಲು ಸೋಂಕಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬ ವೈದ್ಯರು ತಿಳಿಸಿದ್ದಾರೆ.
ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ: ಶುಕ್ರವಾರ ಸಂಜೆ ಸತಾರಾಕ್ಕೆ ತೆರಳಿದ್ದ ಹಂಗಾಮಿ ಸಿಎಂ, ಮಹಾಯುತಿ ಮೈತ್ರಿಕೂಟದ ನಾಯಕರಲ್ಲಿನ ಬಲವಾದ ಒಗ್ಗಟ್ಟಿನ ಬಗ್ಗೆ ಮಾತನಾಡಿದರು. ಕಳೆದ 2.5 ವರ್ಷಗಳ ನಮ್ಮ ಸರ್ಕಾರದ ಕೆಲಸಗಳು ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುತ್ತವೆ. ಇದಕ್ಕಾಗಿಯೇ ಜನರು ನಮಗೆ ಐತಿಹಾಸಿಕ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಅವಕಾಶವನ್ನು ಪ್ರತಿಪಕ್ಷಗಳಿಗೆ ನಿರಾಕರಿಸಿದರು. ಮಹಾಯುತಿಯ ಮೂವರೂ ಮಿತ್ರರು ಉತ್ತಮ ತಿಳಿವಳಿಕೆ ಹೊಂದಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಾಳೆ ನಿರ್ಧರಿಸಲಾಗುವುದು ಎಂದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ನವೆಂಬರ್ 23ಕ್ಕೆ ಫಲಿತಾಂಶ ಬಂದಿದ್ದರೂ ಮೈತ್ರಿಕೂಟ ಇನ್ನೂ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. 288 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ - ಕ್ರಮವಾಗಿ 57 ಮತ್ತು 41 ಸ್ಥಾನಗಳಲ್ಲಿ ಜಯಗಳಿಸಿವೆ.
ಇದನ್ನು ಓದಿ:ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಆಪ್ ಮೈತ್ರಿ ಇಲ್ಲ: ಕೇಜ್ರಿವಾಲ್